ನವದೆಹಲಿ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಕೇರಳದ ವಯನಾಡ್‌ಗೆ ತೆರಳಿದ್ದಾಗ ತಮಿಳುನಾಡಿನ ನೀಲಗಿರಿಯಲ್ಲಿ ಚುನಾವಣಾ ಅಧಿಕಾರಿಗಳು ರಾಹುಲ್ ಅವರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ.
#WATCH| The Helicopter through which Congress leader Rahul Gandhi arrived in Nilgiris, Tamil Nadu was checked by the Election Commission's Flying Squad officials in Nilgiris.
(Video source: Election Commission Flying Squad)pic.twitter.com/aSOoNxyUJB
— ANI (@ANI)April 15, 2024

ಹೆಲಿಕಾಪ್ಟರ್ ಲ್ಯಾಂಡ್ ಆದ ಬಳಿಕ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ. ಅಧಿಕಾರಿಗಳ ತಪಾಸಣೆಗೆ ಸಹಕರಿಸಿದ ರಾಹುಲ್‌ ಗಾಂಧಿ, ಬಳಿಕ ತಮ್ಮ ಸಂಸದೀಯ ಕ್ಷೇತ್ರ ವಯನಾಡಿನ ಸುಲ್ತಾನ್ ಬತ್ತೇರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಇದಕ್ಕೂ ಮುನ್ನ ನೀಲಗಿರಿ ಜಿಲ್ಲೆಯಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿಯೂ ಪಾಲ್ಗೊಂಡರು.
ರಾಹುಲ್ ತಮ್ಮ ಲೋಕಸಭಾ ಕ್ಷೇತ್ರವಾದ ಕೇರಳದ ವಯನಾಡಿನಲ್ಲಿ ಸಾರ್ವಜನಿಕ ಸಭೆ ನಡೆಸುತ್ತಿದ್ದಾರೆ ಮತ್ತು ಹಲವಾರು ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಹುಲ್ ಗಾಂಧಿ ಸಭೆ, ಸಭೆಗಳಲ್ಲಿ ನಿರತರಾಗಿದ್ದಾರೆ.
ವಯನಾಡ್‌ನ ಸುಲ್ತಾನ್ ಬತ್ತೇರಿಯಲ್ಲಿ ನಡೆದ ರೋಡ್ ಶೋನಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು. ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದಾರೆ.
ಕಣ್ಣಿಗೊಂದು ಸವಾಲು: 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಗೂಬೆಯನ್ನು ಪತ್ತೆ ಮಾಡಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
