ಲಕ್ನೋ:ಲಾಕ್​ಡೌನ್​ ಹಿನ್ನೆಲೆಯಲ್ಲಿ ಸಮಸ್ಯೆಯಲ್ಲಿ ಸಿಲುಕಿರುವ ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ 15 ಕೋಟಿ ರೂ. ಆರಂಭಿಕ ಕಂತನ್ನು ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್​ಗೆ ಪಾವತಿಸಿದರು.
ಲಾಕ್​ಡೌನ್​ ನಂತರ ಸಣ್ಣ ಕೈಗಾರಿಕೆಗಳು ಆರಂಭವಾಗಲು ಆರ್ಥಿಕ ತೊಂದರೆ ಎದುರಾಗಿದೆ. ತೊಂದರೆ ನಿವಾರಣೆಗೆ ಈ ಹಣ ಬಳಸಿಕೊಂಡು ಸಣ್ಣ ಕೈಗಾರಿಕೆಗಳನ್ನು ಆರಂಭಿಸಬಹುದು ಎಂದು ಅವರು ಹೇಳಿದರು.
ಇದನ್ನೂ ಓದಿಭಾರತ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸಿದ ಅಂಫಾನ್ ಚಂಡಮಾರುತ: ಭಾರಿ ಮಳೆ, ಗಾಳಿ
ಉದ್ಯೋಗ ಸೃಷ್ಟಿಗಾಗಿ ರಾಜ್ಯ ಸರ್ಕಾರ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್​ ಜತೆ ಒಪ್ಪಂದ ಮಾಡಿಕೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್​ಗೆ ಮೊದಲ ಕಂತಿನ ಹಣ ಪಾವತಿ ಮಾಡಲಾಗಿದೆ ಎಂದರು.
ಲಾಕ್​ಡೌನ್​ ನಂತರ ಅಧಿಕ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಆಗಮಿಸಿದ್ದಾರೆ. ವಲಸೆ ಕಾರ್ಮಿಕರ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ಕಲ್ಪಿಸಲು ಸರ್ಕಾರ ಚಿಂತಿಸುತ್ತಿದೆ.
ಇದನ್ನೂ ಓದಿFact Check| ಆರು ವರ್ಷದ ಹಳೆಯ ಫೋಟೋ ಲಾಕ್​ಡೌನ್​ ಸಮಯದಲ್ಲಿ ಸಂಚಲನ ಸೃಷ್ಟಿಸಿತು!
ಸಣ್ಣ ಕೈಗಾರಿಕೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್​ ಜತೆ ರಾಜ್ಯ ಸರ್ಕಾರ ಕೂಡ ಪ್ಯಾಕೇಜ್​ ನೀಡುತ್ತಿದೆ. ಎರಡು ಪ್ಯಾಕೇಜ್​ಗಳನ್ನು ಸಣ್ಣ ಕೈಗಾರಿಕೋದ್ಯಮಿಗಳಿಗೆ ತಲುಪಿಸಲು ಸಾಲ ಮೇಳ ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್​ ಜತೆ ಮಾಡಿಕೊಂಡಿರುವ ಒಪ್ಪಂದದಿಂದ ಸ್ಟಾರ್ಟ್​ಅಪ್​ಗಳ ವೇಗ ಅಧಿಕಗೊಳ್ಳುತ್ತದೆ ಎಂದು ಇದೇ ವೇಳೆ ಉಪ ಮುಖ್ಯಮಂತ್ರಿ ದಿನೇಶ್​ಶರ್ಮಾ ಹೇಳಿದರು.ಈ ಒಪ್ಪಂದ ಹೆಚ್ಚು ಮಂದಿ ಯುವಕರಿಗೆ ಉದ್ಯೋಗ ಒದಗಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. (ಏಜೆನ್ಸೀಸ್​)
ಅಪ್ಪನ ಕಾರಿಗೇ ಸಿಕ್ಕಿ ಪ್ರಾಣ ಬಿಟ್ಟ ಒಂದು ವರ್ಷದ ಮಗು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
