ನವದೆಹಲಿ:ತೈಲ ಕಂಪನಿಗಳು ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿವೆ. ಅಂತಾರಾಷ್ಟ್ರೀಯ ತೈಲ ಬೆಲೆ ಮಾದರಿಗೆ ಅನುಗುಣವಾಗಿ ಮಾಸಿಕ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ನಲ್ಲೂ ಸೆಕ್ಸ್​ ದಂಧೆ..ನಾಯಕತ್ವದ ವಿರುದ್ಧ ಹೊಸ ಬಾಂಬ್​ ಸಿಡಿಸಿದ ಸಿಮಿರೋಸ್‌!
ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸುವ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಒಮ್ಮೆಗೆ 39 ರೂ. ಏರಿಕೆ ಮಾಡಲಾಗಿದೆ. ಆಗಸ್ಟ್ 1 ರಂದು ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು 6.50 ರೂ.ಗಳಷ್ಟು ಹೆಚ್ಚಿಸಿದ್ದು, ಈ ಬಾರಿ ಹೆಚ್ಚಿನ ಮೊತ್ತ ಏರಿಸಲಾಗಿದೆ.
ವಾಣಿಜ್ಯ ಎಲ್​ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳದ ನಂತರ ನವದೆಹಲಿಯಲ್ಲಿ ಪ್ರತಿ ಸಿಲಿಂಡರ್‌ಗೆ 1795.00 ರೂ., ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 2071.50, ಮುಂಬೈನಲ್ಲಿ 1749 ರೂ. ಮತ್ತು ಚೆನ್ನೈನಲ್ಲಿ 1,960.50 ರೂ. ಆಗಿದೆ.
ಇನ್ನು ಗೃಹಬಳಕೆ ಎಲ್‌ಪಿಜಿ (14.2 ಕೆಜಿ) ಬೆಲೆ(ಬೆಂಗಳೂರಿನಲ್ಲಿ) 805.50 ಇದ್ದು, ಕಳೆದ ತಿಂಗಳಿಗೆ ಹೋಲಿಸಿದರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದಾಖಲಾಗಿಲ್ಲ.
ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು, ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತ ಮತ್ತು ಕರೆನ್ಸಿ ವಿನಿಮಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗುತ್ತದೆ.
ಕೃಷ್ಣೆ ಪ್ರವಾಹ..ನೀರಲ್ಲಿ ಕೊಚ್ಚಿಕೊಂಡು ಹೋದ 300ಎಮ್ಮೆಗಳು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + three =
Remember me
