ತ್ರಿಪುರ:ಮೂರು ವರ್ಷದ ಮಗುವನ್ನೂ ಬಿಡದ ಕಾಮುಕ ಮುದುಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಹಿಂದೆ ಅತ್ಯಾಚಾರ ಮಾಡಿದ್ದ ಈ ಆರೋಪಿಯನ್ನು ಕೊನೆಗೂ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ತ್ರಿಪುರದಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ತ್ರಿಪುರದ ಧಲಾಯಿ ಜಿಲ್ಲೆಯಲ್ಲಿ 64 ವರ್ಷದ ವ್ಯಕ್ತಿಯೊಬ್ಬ ತನ್ನ ನೆರೆಮನೆಯ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಪಾಲಕರು ನೀಡಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನ. 11ರಂದು ಈತ ಅತ್ಯಾಚಾರ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಇದು ತ್ರಿಪುರದಲ್ಲಿ ಕಳೆದ ಕೆಲವು ವಾರಗಳಲ್ಲಿ ನಡೆದ ಮಕ್ಕಳ ಮೇಲಿನ ಅತ್ಯಾಚಾರಗಳ ಪೈಕಿ ಮೂರನೆಯದು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
