ಮಹಾರಾಷ್ಟ್ರ:ಟಾಟಾ ಮುಂಬೈ ಮ್ಯಾರಥಾನ್‌ನ 18 ನೇ ಆವೃತ್ತಿಯಲ್ಲಿ ಎಲ್ಲ ವಯಸ್ಸಿನ ಜನರಿಗೂ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ 55,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದೀಗ ಈ ಮ್ಯಾರಾಥಾನ್​ನಲ್ಲಿ ಪಾಲ್ಗೊಂಡಿದ್ದ ಸ್ಫರ್ಧಿಯೊಬ್ಬರ ಉತ್ಸಾಹದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಕಾರಣ ಅವರ ವಯಸ್ಸು.
80 ವರ್ಷದ ಅಜ್ಜಿಯೊಬ್ಬರು ಸೀರೆ ಉಟ್ಟು ವಯಸ್ಕರು ನಾಚುವಂತೆ ಮ್ಯಾರಾಥಾನ್​ನಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಅಜ್ಜಿಯ ಮೊಮ್ಮಗಳು ಡಿಂಪಲ್ ಮೆಹ್ತಾ ಫೆರ್ನಾಂಡಿಸ್ ಅವರು ಇನ್ಸ್​​ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದನ್ನು ನೋಡಿದ ನೆಟ್ಟಿಗರು ಅಜ್ಜಿಯ ಉತ್ಸಾಹವನ್ನು ಕಂಡು ಮೆಚ್ಚುಗೆಯ ಕಮೆಂಟ್ ಮಾಡುತ್ತಿದ್ದಾರೆ.


A post shared by Dimple Mehta Fernandes 🌻 (@inforstyle)

ವೈರಲ್ ಆಗಿರುವ ವಿಡಿಯೋದಲ್ಲಿ ಅಜ್ಜಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು 51 ನಿಮಿಷಗಳಲ್ಲಿ 4.2 ಕಿ.ಮೀ. ದೂರ ಮ್ಯಾರಾಥಾನ್​ನಲ್ಲಿ ಕ್ರಮಿಸಿದ್ದಾರೆ. ಈ ಬಗ್ಗೆ ಮಾಹಿತಿ ಸಂತಸ ಹಂಚಿಕೊಂಡಿರುವ ಮೊಮ್ಮಗಳು ಡಿಂಪಲ್ ಮೆಹ್ತಾ, ಸ್ವಇಚ್ಛೆಯಿಂದ ಪಾಲ್ಗೊಂಡು ಉತ್ಸಾಹದಿಂದ ಅಜ್ಜಿ ಮ್ಯಾರಾಥಾನ್​ನಲ್ಲಿ ಭಾಗವಹಿಸಿದ್ದಾರೆ ಎಂದಿದ್ದಾಳೆ.
ಐದನೇ ಬಾರಿಗೆ ಮ್ಯಾರಾಥಾನ್​ನಲ್ಲಿ ಭಾಗವಹಿಸುತ್ತಿದ್ದು, ಪ್ರತಿದಿನ ಅಭ್ಯಾಸ ಮಾಡುತ್ತೇನೆ ಎಂದು 80 ವರ್ಷದ ವೃದ್ಧೆ ಹೇಳಿಕೊಂಡಿದ್ದಾರೆ.(ಏಜೆನ್ಸೀಸ್)
ಪ್ರೇಮ ವಿವಾಹಕ್ಕೆ ಒಪ್ಪಿಲ್ಲವೆಂದು ಪ್ರಾಣ ಬಿಟ್ಟಿದ್ದ ಜೋಡಿ; ಪಶ್ಚಾತ್ತಾಪದಲ್ಲಿ ಪ್ರತಿಮೆಗೆ ಮದುವೆ ಮಾಡಿ ಮಕ್ಕಳ ಆಸೆ ನೆರವೇರಿಸಿದ ಪಾಲಕರು!


ಈ ದಂಪತಿ ಪೊಲೀಸ್ ಸ್ಟೇಷನ್​ನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದೇಕೆ?


ನಿರ್ಜನ ಪ್ರದೇಶದಲ್ಲಿ ಆಟೋ ಡ್ರೈವರ್ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದುಷ್ಕರ್ಮಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twenty =
Remember me
