ಟೋಕಿಯೋ ಒಲಿಂಪಿಕ್ಸ್​​ನಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಅಥ್ಲೀಟ್ ನೀರಜ್ ಚೋಪ್ರ ಮದುವೆ ವಿಚಾರವಾಗಿ ಮಾತನಾಡಿದ್ದಾರೆ.
1983 ವಿಶ್ವಕಪ್ ಕ್ರಿಕೆಟ್ ವಿಜೇತ ತಂಡದ ನಾಯಕನಾಗಿದ್ದ ಕಪಿಲ್, ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ನೀರಜ್ ಮದುವೆ ಯೋಜನೆ ಬಗ್ಗೆ ಮಾತನಾಡಿದ್ದಾರೆ. ‘ನೀವು ಮದುವೆ ವಿಚಾರವಾಗಿ ಒತ್ತಡಗಳನ್ನು ಹೇಗೆ ಎದುರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ’. ಇದಕ್ಕೆ ಪ್ರತಿಕ್ರಿಯೆ ನೀಡಿರುವ 23 ವರ್ಷದ ನೀರಜ್, ‘ನನ್ನ ಸಂಪೂರ್ಣ ಗಮನವನ್ನು ಕ್ರೀಡೆ ಕಡೆ ಹರಿಸಿದ್ದೇನೆ. ಮದುವೆ ಹಾಗೂ ಇತರೆ ವಿಚಾರಗಳು ಸರಿಯಾದ ಸಮಯಕ್ಕೆ ನಡೆಯುತ್ತದೆ ಎಂದು ನಾಚಿ ನೀರಾಗಿ ಉತ್ತರಿಸಿದ್ದಾರೆ’.
ಕ್ರೀಡೆಯಲ್ಲಿಯೇ ನನ್ನ ಸಂಪೂರ್ಣ ಗಮನ ಇರಲಿದೆ. ಇದಕ್ಕಾಗಿ ನಾನು ಸಾಕಷ್ಟು ಕಠಿಣ ಪರಿಶ್ರಮ ಪಡುತ್ತೇನೆ ಎಂದು ತಮ್ಮ ಮುಂದಿನ ಗುರಿ ಬಗ್ಗೆ ಸಂದರ್ಶನದಲ್ಲಿ ಬಾಯ್ಬಿಟ್ಟಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ 87.58 ಮೀಟರ್ ಎಸೆದು ಇತಿಹಾಸ ಸೃಷ್ಟಿಸಿದರು. ಈ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.
ಇತಿಹಾಸ ನಿರ್ಮಿಸಿದ ನೀರಜ್​ಗೆ ಬಹುಮಾನಗಳ ಸುರಿಮಳೆ… ಇಲ್ಲಿದೆ ಅದರ ಲಿಸ್ಟ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − two =
Remember me
