ನವದೆಹಲಿ:ಒಮಿಕ್ರಾನ್ ಅಪಾಯಕಾರಿಯಲ್ಲ ಎಂದು ಹೇಳಲಾಗುತ್ತಿದ್ದ ಸನ್ನಿವೇಶ ಇದೀಗ ಬದಲಾಗಿದ್ದು, ಒಮಿಕ್ರಾನ್​ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸುವ ಎಚ್ಚರಿಕೆಯ ಸಲಹೆ-ಕಿವಿಮಾತುಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ.
ದಿನೇದಿನೆ ಒಮಿಕ್ರಾನ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಸೋಂಕು ಕಾಣಿಸಿಕೊಂಡಿರುವ ದೇಶಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ರಾಜ್ಯದಲ್ಲೂ ಕಳೆದ ಕೆಲವು ದಿನಗಳಿಂದ ಒಮಿಕ್ರಾನ್​ ತೀವ್ರಗತಿಯಲ್ಲಿ ಹರಡುತ್ತಿದೆ. ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಹರಡುತ್ತಿರುವ ಒಮಿಕ್ರಾನ್​, ನಿನ್ನೆಯಷ್ಟೇ ಉಡುಪಿ ಜಿಲ್ಲೆಗೂ ಪ್ರವೇಶಿಸಿದೆ.
ಇಂದು ಒಮಿಕ್ರಾನ್ ಕುರಿತಂತೆ ಕೇಂದ್ರ ಮತ್ತಷ್ಟು ಎಚ್ಚೆತ್ತಿದ್ದು, ಎಲ್ಲ ರಾಜ್ಯಗಳಿಗೂ ಮುಂಜಾಗ್ರತೆ ವಹಿಸುವಂತೆ ವಿಶೇಷವಾಗಿ ಸೂಚನೆ ನೀಡಿದೆ. ಈ ಹಿಂದೆಯೇ ಕಾಣಿಸಿಕೊಂಡಿರುವ ಕರೊನಾ ರೂಪಾಂತರಿ ವೈರಸ್​ ಡೆಲ್ಟಾಗಿಂತಲೂ ಒಮಿಕ್ರಾನ್ ಮೂರು ಪಟ್ಟು ಹೆಚ್ಚು ಹರಡಬಲ್ಲದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆಯನ್ನು ನೀಡಿದೆ.
ಇದನ್ನೂ ಓದಿ:ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗೆ ಸರಬರಾಜು ಮಾಡಿದ್ದ ಲೋಟ-ತಟ್ಟೆ ಬಿಲ್​ ಪಾಸ್​​ಗೂ ಲಂಚ ಕೇಳಿ ಸಿಕ್ಕಿಬಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ
ಮಾತ್ರವಲ್ಲ, ಜಿಲ್ಲಾಮಟ್ಟದಲ್ಲೇ ಕೋವಿಡ್/ಒಮಿಕ್ರಾನ್​ ಬಗ್ಗೆ ಹೆಚ್ಚಿನ ಗಮನವಹಿಸಿ. ಅಲ್ಲದೆ, ಪರಿಸ್ಥಿತಿ ಬಿಗಡಾಯಿಸಿದರೆ ಅಗತ್ಯ ಬೀಳುವ ಔಷಧ, ವೈದ್ಯಕೀಯ ಪರಿಕರ, ಆಸ್ಪತ್ರೆ ವ್ಯವಸ್ಥೆ, ಸಿಬ್ಬಂದಿ ಲಭ್ಯತೆ ಎಲ್ಲವುಗಳ ಬಗ್ಗೆ ನಿಗಾ ಇರಿಸಿ ಸೂಕ್ತ ವ್ಯವಸ್ಥೆ ಮಾಡಿಟ್ಟುಕೊಂಡಿರಿ ಎಂಬುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್​ ಭೂಷಣ್​ ಎಲ್ಲ ರಾಜ್ಯಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.
ಇದನ್ನೂ ಓದಿ:ಮುಖ್ಯಮಂತ್ರಿಗೇ ಶಾಪ ಹಾಕಿದ ಸ್ವಾಮೀಜಿ: ಒಂದೇ ತಿಂಗಳಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಂತೆ ಬೊಮ್ಮಾಯಿ!
ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಸದ್ಯ ಭಾರತದಲ್ಲಿ 200 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಜಾಸ್ತಿ ಪ್ರಕರಣಗಳು ಕಂಡುಬಂದಿವೆ.
ಮೂರು ವರ್ಷದ ಅವಳಿ ಮಕ್ಕಳ ಸಾವಿನ ಬೆನ್ನಿಗೆ ತಾಯಿಯೂ ನಿಧನ; ತಂದೆ ಇನ್ನೂ ಆಸ್ಪತ್ರೆಯಲ್ಲಿ…

ಸ್ನಾನಕ್ಕೆ ಹೋಗಿದ್ದವನನ್ನು ಹಾಗೇ ಠಾಣೆಗೆ ಕರೆದೊಯ್ದ ಪೊಲೀಸರು; ಪಕ್ಕದ ಮನೆಯವರ ಜತೆ ಜಗಳವಾಡಿದ್ದ ರೌಡಿಶೀಟರ್​ ಮರ್ಯಾದೆ ಬೀದಿಪಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
