ನವದೆಹಲಿ:ಜಗತ್ತಿನಾದ್ಯಂದ ಆತಂಕ ಸೃಷ್ಟಿಸಿರುವ ಒಮಿಕ್ರಾನ್​, ಇದೀಗ ಮತ್ತೆ 30 ದೇಶಗಳಿಗೆ ವ್ಯಾಪಿಸುವ ಮೂಲಕ ಸೋಂಕಿನ ಭೀತಿಯನ್ನು ಹೆಚ್ಚಿಸಿದೆ. ಮಾತ್ರವಲ್ಲ, ಸೋಂಕಿನ ಪ್ರಮಾಣ 3 ದಿನಗಳಿಗೆ ದುಪ್ಪಟ್ಟಾಗುತ್ತಿದೆ ಎಂಬ ಮಾಹಿತಿಯೂ ಬಹಿರಂಗಗೊಂಡಿದೆ.
ಕರೊನಾದ ಹೊಸ ರೂಪಾಂತರಿ ವೈರಸ್​ ಒಮಿಕ್ರಾನ್ ಕುರಿತ ಈ ಅಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆಯೇ ಬಹಿರಂಗಗೊಳಿಸಿದೆ. ಡಿ. 10ರಂದು ಜಗತ್ತಿನ 59 ದೇಶಗಳಲ್ಲಿ ಒಮಿಕ್ರಾನ್​ ಕಾಣಿಸಿಕೊಂಡಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಇದೀಗ ಒಮಿಕ್ರಾನ್ ಜಗತ್ತಿನ ಇನ್ನೂ 30 ರಾಷ್ಟ್ರಗಳಲ್ಲಿ ಹಬ್ಬಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಇದನ್ನೂ ಓದಿ:ಜಗತ್ತಿನ 59 ದೇಶಗಳಲ್ಲಿ ಪತ್ತೆಯಾಗಿದೆ ಒಮಿಕ್ರಾನ್​; ಭಾರತದಲ್ಲಿ ಇದುವರೆಗಿನ ಪ್ರಕರಣ ಎಷ್ಟು ಗೊತ್ತೇ?
ಡಿ. 16ರ ಮಾಹಿತಿ ಪ್ರಕಾರ 89 ದೇಶಗಳಲ್ಲಿ ಒಮಿಕ್ರಾನ್ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಅದು ಡೆಲ್ಟಾ ವೇರಿಯಂಟ್​ ಪ್ರಕರಣಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಿದೆ. ಒಮಿಕ್ರಾನ್ ಎಷ್ಟು ವೇಗವಾಗಿ ಹರಡುತ್ತಿದೆ ಎಂದರೆ ಒಂದೂವರೆಯಿಂದ 3 ದಿನಗಳಲ್ಲಿ ಸೋಂಕಿನ ಪ್ರಮಾಣ ದುಪ್ಪಟ್ಟಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಅಜ್ಜಿಯೊಂದಿಗೆ ಫ್ಲ್ಯಾಟ್​ ನೋಡಲು ಹೋಗಿದ್ದ 2 ವರ್ಷದ ಬಾಲಕ ಐದನೇ ಮಹಡಿಯಿಂದ ಬಿದ್ದು ಸಾವು!

ಇದು ‘ಎಣ್ಣೆ-ಏಟು’: ಪಾನಮತ್ತ ಚಾಲಕ, ಕೋಪೋದ್ರಿಕ್ತ ಮಾಲೀಕ; ಮುಂದಾಗಿದ್ದೆಲ್ಲ ವೈರಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 13 =
Remember me
