ಕಣ್ಣೂರು:ಕೇರಳದ ಪಯನ್ನೂರಿನಲ್ಲಿರುವ ಆರ್​ಎಸ್​ಎಸ್​ ಕಚೇರಿ ಮೇಲೆ ಬಾಂಬ್​ ದಾಳಿ ನಡೆದಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗಿದೆ.
ಮಂಗಳವಾರ ಬೆಳಗ್ಗೆ ನಡೆದ ಬಾಂಬ್​ ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳೀಯ ಪೊಲೀಸ್​ ಠಾಣೆ ಸಮೀಪದಲ್ಲೇ ಈ ದಾಳಿ ನಡೆದಿದೆ. ದಾಳಿ ವೇಳೆ ಯಾರಿಗೂ ಗಾಯಗಳಾಗಿಲ್ಲ, ಕಟ್ಟಡದ ಕಿಟಕಿ ಗಾಜುಗಳಿಗೆ ಮಾತ್ರ ಹಾನಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಮಧ್ಯರಾತ್ರಿ 1.30 ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪಯ್ಯನ್ನೂರಿನಲ್ಲಿರುವ ರಾಷ್ಟ್ರ ಭವನ ಎಂಬ ಆರ್‌ಎಸ್‌ಎಸ್ ಕಚೇರಿಯ ಮೇಲೆ ಸ್ಥಳೀಯವಾಗಿ ತಯಾರಿಸಿದ ಬಾಂಬ್ ಅನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ. 2010-2016ರ ನಡುವೆ ಈ ಪ್ರದೇಶದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲವಾರು ದಾಳಿಗಳು ನಡೆದಿವೆ.
ಪೊಲೀಸ್​ ಠಾಣೆಯಿಂದ 100 ಮೀಟರ್​ ದೂರದಲ್ಲಿರುವ ಕಚೇರಿ ಮೇಲೆ ದಾಳಿಯಾಗಿದೆ ಎಂದರೆ ಏನರ್ಥ, ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದಾರೆಯೇ ಎಂದು ಬಿಜೆಪಿ ನಾಯಕ ಟಾಮ್​ ವಡಕ್ಕನ್​ ತರಾಟೆಗೆ ತೆಗೆದುಕೊಂಡಿದ್ದು, ಕಣ್ಣೂರಿನಂತರ ಸೂಕ್ಷ್ಮ ಜಿಲ್ಲೆಯಲ್ಲಿ ಕಚೇರಿಗಳಿಗೆ ವಿಶೇಷವಾಗಿ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ಯಾವುದೇ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಮುಖ್ಯಮಂತ್ರಿಗೆ ಕಳಪೆ ಟೀ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಅಧಿಕಾರಿ!

ಪ್ರತಿಯೊಬ್ಬ ವ್ಯಕ್ತಿಯೂ ವಿಮಾನದಲ್ಲಿ ಸಂಚರಿಸಬೇಕು, ದಿಯೋಘರ್​ ವಿಮಾನ ನಿಲ್ದಾಣ ಉದ್ಘಾಟಿಸಿ ಪ್ರಧಾನಿ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − four =
Remember me
