ನವದೆಹಲಿ:ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬಳ ಮೇಲೆ ಕೈ ಮಾಡಿ ಆಕೆಯ ಸೀರೆಯನ್ನು ಎಳೆದಿರುವ ಮನಕದಡುವ ವಿಡಿಯೋ ಉತ್ತರ ಪ್ರದೇಶದಲ್ಲಿಂದು ಬೆಳಕಿಗೆ ಬಂದಿದೆ. ಸ್ಥಳೀಯ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮಹಿಳೆಯ ಮೇಲೆ ದಾಳಿ ನಡೆಸಿದವರು ಅಖಿಲೇಶ್​ ಯಾದವ್​ ಅವರ ಸಮಾಜವಾದಿ ಪಾರ್ಟಿಯ ಬೆಂಬಲಿಗರೆಂದು ಹೇಳಲಾಗಿದೆ. ಬ್ಲಾಕ್​ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆಗೆ ಆಕೆಯು ಸಹ ನಾಮಪತ್ರ ಸಲ್ಲಿಸಲು ಬಂದಿದ್ದಳು ಎಂದು ವರದಿಯಾಗಿದೆ.
ಈ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 130 ಕಿ.ಮೀ ದೂರದಲ್ಲಿರುವ ಲಖಿಂಪುರ್​ ಖೇರಿಯಲ್ಲಿ ನಡೆದಿದೆ. ಇಂದು ಉತ್ತರ ಪ್ರದೇಶದ ಅನೇಕ ಪ್ರದೇಶಗಲ್ಲಿ ಒಂದು ಡಜನ್​ಗೂ ಅಧಿಕ ಗಲಾಟೆಗಳು ನಡೆದಿವೆ ಎಂದು ಪೊಲೀಸ್​ ಅಧಿಕಾರಿ ಪ್ರಶಾಂತ್​ ಕುಮಾರ್​ ಎಂಬುವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
825 ಬ್ಲಾಕ್ ಪ್ರಮುಖ್ ಅಥವಾ ಸ್ಥಳೀಯ ಪಂಚಾಯತ್ ಮುಖಂಡರಿಗೆ ಶನಿವಾರ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಆದರೆ 14 ಪ್ರದೇಶಗಳಿಂದ ಹಿಂಸಾಚಾರ ವರದಿಯಾಗಿದೆ ಎಂದು ಪ್ರಶಾಂತ್​ ಕುಮಾರ್ ಹೇಳಿದರು.
ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬಹುತೇಕ ಸ್ಥಾನಗಳಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು.(ಏಜೆನ್ಸೀಸ್​)
ಕರ್ನಾಟಕದ ‘ಸಿಂಗಂ’ ಕೆ. ಅಣ್ಣಾಮಲೈ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ

ವಾಹನ ಸವಾರರೇ ಗಮನಿಸಿ.. ಆರು ತಿಂಗಳ ಬಳಿಕ ಆ ದಾಖಲೆ ಸಿಗಲ್ಲ…

ಜನ ಕೇಳುವ ಪ್ರಶ್ನೆಗೆ ಉತ್ತರಿಸಲು ಇರಿಸುಮುರಿಸು: ನೋವಿನಿಂದಲೇ ಮಹಿಳಾ ಎಸ್​ಐ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
