ಹುಬ್ಬಳ್ಳಿ:ಇತ್ತೀಚೆಗೆ ಯುವಕರು, ಕಟ್ಟುಮಸ್ತಾಗಿರುವವರು, ನಿಯಮಿತವಾಗಿ ಕಸರತ್ತು ನಡೆಸುತ್ತಿರುವವರು ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆತಂಕವನ್ನು ಮೂಡಿಸಿದೆ. ಈ ನಡುವೆ ಕರ್ತವ್ಯನಿರತ ಯೋಧರೊಬ್ಬರೂ ಹೃದಯಾಘಾತಕ್ಕೆ ಬಲಿಯಾದ ಪ್ರಕರಣವೊಂದು ನಡೆದಿದೆ.
ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಗಂಗಾಧರಯ್ಯ ಹಿರೇಮಠ (49) ಹೃದಯಾಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡ ಸೈನಿಕ. ಇವರು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಿಎಸ್​ಎಫ್​ ಬೆಟಾಲಿಯನ್​ 138ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು 28 ವರ್ಷಗಳ ಹಿಂದೆಯೇ ದೇಶ ಕಾಯುವ ಕಾಯಕಕ್ಕೆ ಸೇರಿದ್ದರು. ಆದರೆ ಇವರು ಪಶ್ಚಿಮಬಂಗಾಳದ್ ಕುಚ್​ ಬಿಹಾರ್​ನಲ್ಲಿ ಕರ್ತವ್ಯನಿರತರಾಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಇಂದು ರಾತ್ರಿ ಸ್ವಗ್ರಾಮ ರೊಟ್ಟಿಗವಾಡಕ್ಕೆ ಇವರ ಪಾರ್ಥಿವ ಶರೀರ ತಲುಪುವ ನಿರೀಕ್ಷೆ ಇದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಸೈನಿಕ ಗಂಗಾಧರಯ್ಯ ಅವರ ಅಂತ್ಯಕ್ರಿಯೆ ನಡೆಸಲು ತಾಲೂಕು ಆಡಳಿತ ಸಜ್ಜಾಗುತ್ತಿದೆ.
‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
