ಜಮ್ಮು:ಶತ್ರುರಾಷ್ಟ್ರ ಪಾಕಿಸ್ತಾನ ಭಾರತದ ಗಡಿ ಪ್ರದೇಶದಲ್ಲಿ ಮತ್ತೊಮ್ಮೆ ಕದನವಿರಾಮವನ್ನು ಉಲ್ಲಂಘಿಸಿದ್ದು, ಆ ಮೂಲಕ ಭಾರತವನ್ನು ಕೆಣಕುವ ಪ್ರಯತ್ನ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯ ಲೈನ್​ ಆಫ್​ ಕಂಟ್ರೋಲ್​ ಪ್ರದೇಶದಲ್ಲಿ ಮಂಗಳವಾರ ಅಪ್ರಚೋದಿತವಾಗಿ ಕದನವಿರಾಮ ಉಲ್ಲಂಘಿಸಿರುವ ಪಾಕ್, ಭಾರತದ ಯುದ್ಧನೆಲೆಯತ್ತ ಗುಂಡುಗಳನ್ನು ಹಾರಿಸಿದೆ.
ಪೂಂಚ್​ನ ಮಂಕೋಟೆ ಸೆಕ್ಟರ್​ನ ಎಲ್​ಒಸಿ ಉದ್ದಕ್ಕೂ ಬೆಳಗಿನ ಜಾವ 4.30ರ ಸಮಯದಲ್ಲಿ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದೆ. ಆದರೆ ಅದಕ್ಕೆ ಭಾರತೀಯ ಯೋಧರು ತಕ್ಕ ಪ್ರತೀಕಾರ ಕೈಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ವಕ್ತಾರ ಕರ್ನಲ್​ ದೇವೆಂದರ್ ಆನಂದ್ ತಿಳಿಸಿದ್ದಾರೆ.
ಈ ವರ್ಷಾರಂಭದಿಂದಲೂ ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸುತ್ತಲೇ ಬಂದಿರುವ ಪಾಕ್​, ಇದುವರೆಗೆ 3186 ಸಲ ಕದನವಿರಾಮ ಉಲ್ಲಂಘಿಸಿದೆ. ಪರಿಣಾಮ 24 ನಾಗರಿಕರು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
