ಸರನ್​:ಬಿಹಾರದ ಸರನ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಆರ್‌ಜೆಡಿ ಕಾರ್ಯಕರ್ತರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಎರಡು ದಿನಗಳ ಕಾಲ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ:‘ಪುರಿ ಜಗನ್ನಾಥ ಮೋದಿ ಭಕ್ತ ಹೇಳಿಕೆ: 3 ದಿನ ಉಪವಾಸ ಮಾಡುತ್ತೇನೆಂದ ಬಿಜೆಪಿಯ ಸಂಬಿತ್ ಪಾತ್ರಾ
ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತದಾನ ದಿನದ ಸೋಮವಾರ ಸಂಜೆ ಆರ್‌ಜೆಡಿಯ ಸರನ್ ಅಭ್ಯರ್ಥಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಚಾಪ್ರಾ ನಗರದ ಬೂತ್‌ಗೆ ಭೇಟಿ ನೀಡಿದ ಹೊರಡಿದ ನಂತರ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ
ಮಂಗಳವಾರ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತರನ್ನು ಚಂದನ್‌ ಯಾದವ್‌ (25) ಎಂದು ಗುರುತಿಸಲಾಗಿದೆ.
ಭಿಖಾರಿ ಠಾಕೂರ್‌ ಚೌಕ್‌ ಬಳಿಯ ಬಡಾ ಟೆಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. “ಈ ಘಟನೆಗೆ ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಎರಡು ದಿನಗಳ ಕಾಲ ಇಂಟರ್ನೆಟ್ ಅನ್ನು ನಿಷೇಧಿಸಲಾಗಿದೆ” ಎಂದು ಸರನ್ ಎಸ್ಪಿ ಗೌರವ್ ಮಂಗಳಾ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸೋಮವಾರ ಚುನಾವಣೆ ನಡೆದ ಬಿಹಾರದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಸರನ್ ಕೂಡ ಸೇರಿದೆ. ಐದು ಸ್ಥಾನಗಳಲ್ಲಿ ಶೇ.52.35ರಷ್ಟು ಮತದಾನವಾಗಿದೆ. ಸರನ್ 50.46 ರಷ್ಟು ಮತದಾನವಾಗಿದೆ. ರೋಹಿಣಿ ಆಚಾರ್ಯ ಅವರು ಸರನ್‌ನಲ್ಲಿ ಎರಡು ಬಾರಿಯ ಹಾಲಿ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ವಿರುದ್ಧ ಸ್ಪರ್ಧಿಸಿದ್ದರು.
ಮಧ್ಯಪ್ರದೇಶ: ಫ್ಲೈಓವರ್‌ನಿಂದ ಉರುಳಿ ಬಿದ್ದ ಖಾಸಗಿ ಬಸ್; ಇಬ್ಬರು ಸಾವು, 40 ಮಂದಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 12 =
Remember me
