ಮುಂಬೈ:ಬಾಲಿವುಡ್​ನಲ್ಲಿ ಇತ್ತೀಚೆಗೆ ಭಾರಿ ಸುದ್ದಿಯಲ್ಲಿರುವ ಹಾಗೂ ಆಗಾಗ ವಿವಾದಕ್ಕೆ ಈಡಾಗುತ್ತಲೇ ಇರುವ ನಟಿ ಕಂಗನಾ ರಣಾವತ್​ ವಿರುದ್ಧ ಈಗ ಮತ್ತೊಂದು ಎಫ್​​ಐಆರ್ ದಾಖಲಾಗಿದೆ.
ಮುಂಬೈನ ಬಾಂದ್ರಾ ಮ್ಯಾಜಿಸ್ಟ್ರೇಟ್​ ಮೆಟ್ರೋಪಾಲಿಟನ್​ ಕೋರ್ಟ್​ ಆದೇಶದ ಹಿನ್ನೆಲೆಯಲ್ಲಿ ಬಾಂದ್ರಾ ಠಾಣೆಯ ಪೊಲೀಸರು ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸೋದರಿ ರಂಗೋಲಿ ಚಾಂಡೆಲ್ ವಿರುದ್ಧ 124ಎ ಸೇರಿ ವಿವಿಧ ಸೆಕ್ಷನ್​ಗಳ ಅಡಿ ಎಫ್​ಐಆರ್​ ದಾಖಲಿಸಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್​ಗಳ ಮೂಲಕ ಇವರಿಬ್ಬರೂ ಸಮುದಾಯಗಳ ನಡುವೆ ಒಡಕು ಮೂಡಲು ಯತ್ನಿಸಿದ್ದಾರೆ ಎಂಬ ದೂರಿನ ಮೇರೆಗೆ ಈ ಕ್ರಮಕೈಗೊಳ್ಳಲಾಗಿದೆ.
ಈ ಹಿಂದೆ ಏಪ್ರಿಲ್​ನಲ್ಲಿ ಸಹೋದರಿ ರಂಗೋಲಿ ಚಾಂಡೆಲ್​ ಹೇಳಿಕೆ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸಮಜಾಯಿಷಿ ಕೊಟ್ಟಿದ್ದ ನಟಿ ಕಂಗನಾ ವಿರುದ್ಧ ಮುಂಬೈನ ಅಂಬೂಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಇತ್ತೀಚೆಗೆ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವಿಟರ್​​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಕಂಗನಾ ವಿರುದ್ಧ ತುಮಕೂರಿನ ಕ್ಯಾತಸಂದ್ರ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬೆಂಗಳೂರು ಹೈಕೋರ್ಟ್ ವಕೀಲ ರಮೇಶ್ ನಾಯ್ಕ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಜೆಎಂಎಫ್​ಸಿ ನ್ಯಾಯಾಲಯವು ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಕೋರ್ಟ್​ ಆದೇಶಿಸಿತ್ತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + two =
Remember me
