ನವದೆಹಲಿ:ದೆಹಲಿ ನಿರ್ಭಯಾ ಪ್ರಕರಣದ ಆರೋಪದಡಿಯಲ್ಲಿ ತಿಹಾರ್​ ಜೈಲಿನಲ್ಲಿರುವ ಅಪರಾಧಿಗಳ ಪೈಕಿ ಒಬ್ಬಾತ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡಿರುವ ಘಟನೆ ನಡೆದಿದೆ.
ಮಾರ್ಚ್​ 3ರಂದು ಗಲ್ಲಿಗೆ ಏರಲಿರುವ ಅಪರಾಧಿ ವಿನಯ್​ ಶರ್ಮಾ ಫೆ.16ರಂದು ತನ್ನ ತಲೆಯನ್ನು ಜೈಲಿನ ಗೋಡೆಗೆ ಚಚ್ಚಿಕೊಂಡಿದ್ದಾನೆ ಎನ್ನುವುದು ವರದಿಯಾಗಿದೆ. ಆತನ ಮಾನಸಿಕ ಸ್ಥಿತಿ ಸರಿ ಇಲ್ಲದ ಕಾರಣ ಆತ ಈ ರೀತಿಯಲ್ಲಿ ನಡೆದುಕೊಂಡಿದ್ದಾನೆ ಎನ್ನಲಾಗಿದೆ, ಅಪರಾಧಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ವಿನಯ್​ ಶರ್ಮಾ ತನ್ನ ತಪ್ಪನ್ನು ಮನ್ನಿಸುವಂತೆ ರಾಷ್ಟ್ರಪತಿಗಳಿಗೆ ಕ್ಷಮಾದಾನ ಪತ್ರವನ್ನು ಬರೆದಿದ್ದ. ಆದರೆ ರಾಷ್ಟ್ರಪತಿಗಳು ಆ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆ ಆತ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ. ಸುಪ್ರೀಂ ಕೋರ್ಟ್​ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್​ 3ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ಆದೇಶ ನೀಡಿದೆ.
ಅಪರಾಧಿ ವಿನಯ್​ ಶರ್ಮಾ ಮಾನಸಿಕ ಸ್ಥಿತಿ ಸರಿ ಇಲ್ಲ ಎಂಬ ಕಾರಣಕ್ಕೆ ಆತನ ಪರ ವಕೀಲ ಆತನಿಗೆ ಗಲ್ಲು ಶಿಕ್ಷೆ ವಿಧಿಸಬಾರದು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದ. ಆದರೆ ನ್ಯಾಯಾಲಯವು ಆತನಿಗೆ ಚಿಕಿತ್ಸೆ ನೀಡಲು ಹೇಳಿ, ಗಲ್ಲು ಶಿಕ್ಷೆ ತಡೆಯ ವಿಚಾರವನ್ನು ಕೈ ಬಿಟ್ಟಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − seven =
Remember me
