ಕೊಚ್ಚಿ:ಚೀನಾದಲ್ಲಿ ಈಗಾಗಲೇ 26 ಮಂದಿಯನ್ನು ಬಲಿಪಡೆದಿರುವ ಡೆಡ್ಲಿ ಕೊರೊನಾ ವೈರಸ್​ ಕೇರಳಕ್ಕೂ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಶಂಕಿತ ಕೊರೊನಾ ವೈರಸ್​ ಸೋಂಕಿತ ಯುವಕನೋರ್ವನನ್ನು ಕಲಾಮೆಸ್ಸರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.  ಈತ ವಿದ್ಯಾರ್ಥಿಯಾಗಿದ್ದು ಇತ್ತೀಚೆಗಷ್ಟೇ ಚೀನಾದಿಂದ ವಾಪಸಾಗಿದ್ದ. ಅತಿಯಾದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ. ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ  ಈತನಿಗೆ ಕೊರೊನಾ ವೈರಸ್​ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಡಿಕಲ್​ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.
ವಿದ್ಯಾರ್ಥಿಯನ್ನು ಪ್ರತ್ಯೇಕ ವಾರ್ಡ್​ನಲ್ಲಿ ಅಬ್ಸರ್ವೇಶನ್​ನಲ್ಲಿ ಇಡಲಾಗಿದೆ. ರಕ್ತದ ಮಾದರಿಯನ್ನು ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ವ್ಯದ್ಯಕೀಯ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
