ಇಸ್ಲಾಮಬಾದ್​:ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಉತ್ತಮ ಆಡಳಿತ ನೀಡಿ, ಪಾಕಿಸ್ತಾನದ ಏಳಿಗೆಗೆ ಶ್ರಮಿಸಿ, ಒಳ್ಳೆಯ ಪ್ರಧಾನಿ ಎನಿಸಿಕೊಳ್ಳಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ. ಆದರೆ, ಅವರು ಮಾತ್ರ ಆ ಕೆಲಸ ಬಿಟ್ಟು, ಭಾರತದ ಕಾಶ್ಮೀರ ನಿವಾಸಿಗಳ ರಾಯಭಾರಿಯಾಗಿ ಜಾಗತಿಕವಾಗಿ ಅವರ ಕಷ್ಟನಷ್ಟಗಳನ್ನು ಪ್ರಸ್ತಾಪಿಸುತ್ತೇನೆ ಎಂದು ಹೇಳುತ್ತಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಡುತ್ತಿದ್ದ ಸಂವಿಧಾನದ ವಿಧಿ 370 ಅನ್ನು ರದ್ದುಗೊಳಿಸಿತ್ತು. ಅಲ್ಲದೆ, ರಾಜ್ಯವನ್ನು ವಿಭಜಿಸಿ ಜಮ್ಮು ಮತ್ತು ಕಾಶ್ಮೀರ ಎಂಬ ಪ್ರತ್ಯೇಕ ರಾಜ್ಯವನ್ನೂ, ಲಡಾಖ್​ ಎಂಬ ಕೇಂದ್ರಾಡಳಿತ ಪ್ರದೇಶವನ್ನೂ ರೂಪಿಸಿತ್ತು. ಆ ಪ್ರದೇಶದಲ್ಲಿ ಅಸ್ಥಿರತೆ ಮೂಡಿಸಲು ಸದಾ ಪ್ರಯತ್ನಿಸುವ ಪಾಕಿಸ್ತಾನಕ್ಕೆ ಇದರಿಂದ ಭಾರಿ ಇರಿಸುಮುರಿಸು ಉಂಟಾಗಿತ್ತು.
ಇದನ್ನೂ ಓದಿ:ಲಡಾಖ್​ನಲ್ಲಿ ಆಕ್ರಮಣಕಾರಿ ಮನೋಭಾವ ತೋರುತ್ತಿರುವುದಕ್ಕೆ ಚೀನಾ ಭಾರಿ ಬೆಲೆ ತೆರಬೇಕಾಗುತ್ತೆ
ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಜಾಗತಿಕ ವೇದಿಕೆಗಳಲ್ಲಿ ಪ್ರಸ್ತಾಪಿಸಿ, ಭಾರತಕ್ಕೆ ಮುಜುಗರ ಉಂಟು ಮಾಡಲು ಅಂದಿನಿಂದಲೂ ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಹಾಗೆ ಮಾಡಿ ಸಾಕಷ್ಟು ಬಾರಿ ಮುಖಭಂಗಕ್ಕೆ ಒಳಗಾಗಿದೆ. ಆದರೂ ಅದು ಬುದ್ಧಿ ಕಲಿತಿಲ್ಲ.
ಈಗಲೂ ತಮ್ಮ ರಾಷ್ಟ್ರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿಕೊಂಡು ಒಳ್ಳೆಯ ಪ್ರಧಾನಿ ಎನಿಸಿಕೊಳ್ಳಬೇಕಿದ್ದ ಇಮ್ರಾನ್​ ಖಾನ್​ ಈಗಲೂ ಕೂಡ ತಾವು ಆ ಕೆಲಸ ಮಾಡುವುದಿಲ್ಲ. ಬದಲಿಗೆ ಕಾಶ್ಮೀರಿಗಳ ರಾಯಭಾರಿಯಾಗಿ ಜಾಗತಿಕ ವೇದಿಕೆಯಲ್ಲಿ ಅವರ ಕಷ್ಟನಷ್ಟಗಳನ್ನು ಪ್ರಸ್ತಾಪಿಸುವುದಾಗಿ ಅಂಬೋ ಎನ್ನುತ್ತಿದ್ದಾರೆ.
ರಾಷ್ಟ್ರೀಯ ಭದ್ರತೆಯಲ್ಲಿ ರಾಜಕಾರಣ ಬೇಡ; ರಾಹುಲ್​ ಗಾಂಧಿಗೆ ಶರದ್​ ಪವಾರ್​ ಪಾಠ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
