ನವದೆಹಲಿ:ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ)ಯಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 185 ಹುದ್ದೆಗಳಿದ್ದು, ಅವುಗಳ ಪೈಕಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗಕ್ಕೆ 41 ಹುದ್ದೆಗಳು, ಮೆಕಾನಿಕಲ್ ಇಂಜಿನಿಯರಿಂಗ್-43, ಕಂಪ್ಯೂಟರ್ ಸೈನ್ಸ್- 32, ಎಲೆಕ್ಟ್ರಿಕಲ್ ಇಂಜಿನಿಯರಿಂಗ್-12, ಮೆಟಲರ್ಜಿ- 10, ಫಿಜಿಕ್ಸ್-8, ಕೆಮಿಸ್ಟ್ರಿ-7, ಕೆಮಿಕಲ್- 6, ಏರೋನಾಟಿಕಲ್-9, ಸಿವಿಲ್-3, ಗಣಿತ-4, ಸೈಕಾಲಜಿ ವಿಭಾಗಕ್ಕೆ 10 ಹುದ್ದೆಗಳಿವೆ.ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜಿಎಟಿಇ ಹಾಗೂ ಎನ್​​ಇಟಿಯಲ್ಲಿ ಪಡೆದ ಅರ್ಹತೆಯನ್ನು/ ಅಂಕಗಳನ್ನು ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು rac.gov.in ನಲ್ಲಿ ಮೇ 29 ರಿಂದ ಜುಲೈ 10ರ ವರೆಗೆ ಆನ್​ಲೈನ್ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಇದನ್ನು ನೋಡಿ: https://bit.ly/2zrZ2Iu
Video ] ಅಷ್ಟಕ್ಕೂ ಹೆಣ್ಣು ಜಿರಾಫೆಯ ಮನಗೆಲ್ಲಲು ಇಲ್ಲಿ ನಡೆಯುತ್ತಿರುವುದಾದರೂ ಏನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 10 =
Remember me
