ನವದೆಹಲಿ:ಅಯೋಧ್ಯೆಯ ಶ್ರೀ ರಾಮ ಮಂದಿರದ ಶಿಲನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸೇರಿ 250 ಮಂದಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಕೋವಿಡ್​-19 ಪಿಡುಗಿನ ಹಿನ್ನೆಲೆಯಲ್ಲಿ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಈ ನಿರ್ಧಾರ ಕೈಗೊಂಡಿದೆ.
ಅಯೋಧ್ಯೆಯಲ್ಲಿನ ಕೆಲ ಪ್ರಮುಖ ಸಂತರು, ರಾಮ ದೇವಸ್ಥಾನ ಅಭಿಯಾನದ ಭಾಗವಾಗಿದ್ದ ಹಿರಿಯ ಮುಖಂಡರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ಮತ್ತು ವಿಶ್ವ ಹಿಂದು ಪರಿಷತ್​ನ ಹಿರಿಯ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ.
ಇದನ್ನೂ ಓದಿ:ವಂದೇ ಭಾರತ ಯೋಜನೆಯಡಿ ಜು.22ರಿಂದ ಅಮೆರಿಕಕ್ಕೆ ವಿಮಾನ ಸೌಲಭ್ಯ
ಕೇಂದ್ರ ಸರ್ಕಾರದ ಹಿರಿಯ ಸಚಿವರು ಮತ್ತು ಉತ್ತರ ಪ್ರದೇಶ ಸರ್ಕಾರದ ಕೆಲ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್​ 5ರಂದು ನಡೆಯಲಿರುವ ಶ್ರೀ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11ಗಂಟೆಗೆ ಅಯೋಧ್ಯೆಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 1.10ರವರೆಗೆ ಇರಲಿದ್ದಾರೆ ಎನ್ನಲಾಗಿದೆ.ಭೂಮಿ ಪೂಜೆ ಕಾರ್ಯಕ್ರಮ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಕಾಶಿ ಮತ್ತು ವಾರಾಣಸಿಯ ಅರ್ಚಕರು ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಿ20 ವಿಶ್ವಕಪ್ ಮುಂದೂಡಿದ ಐಸಿಸಿ; ಐಪಿಎಲ್ ಹಾದಿ ಸುಗಮ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 19 =
Remember me
