ನವದೆಹಲಿ:ಯುದ್ಧಪೀಡಿತ ಇಸ್ರೇಲ್​ನಿಂದ 197 ಭಾರತೀಯರನ್ನು ಸುರಕ್ಷಿತವಾಗಿ ಹೊತ್ತು ಸಾಗಿದ ಮೂರನೇ ವಿಶೇಷ ವಿಮಾನ ಇಂದು ಮುಂಜಾನೆ ದೆಹಲಿಗೆ ಬಂದಿಳಿಯಿತು. ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರ ದಾಳಿಯ ಬಳಿಕ ಇಸ್ರೇಲ್​-ಹಮಾಸ್​ ನಡುವೆ ಆರಂಭವಾದ ಯುದ್ಧ ಒಂದು ವಾರ ಕಳೆದರೂ ಕದನ ಕಾರ್ಮೋಡ ಇನ್ನು ತಿಳಿಯಾಗಿಲ್ಲ. ಯುದ್ಧದ ಭೀತಿ ಮುಂದುವರಿದಿದ್ದು, ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ಆಪರೇಷನ್​ ಅಜಯ್​ ಹೆಸರಿನಲ್ಲಿ ಸುರಕ್ಷಿತವಾಗಿ ತವರಿಗೆ ಕರೆತರುತ್ತಿದೆ.
ಇಂದು ಮುಂಜಾನೆ ದೆಹಲಿ ಇಂದರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 197 ಭಾರತೀಯರನ್ನು ಹೊತ್ತ 3ನೇ ವಿಮಾನ ಬಂದಿಳಿಯಿತು. ಈ ವೇಳೆ ಕೇಂದ್ರ ಸಚಿವ ಕೌಶಲ್​ ಕಿಶೋರ್​ ಅವರು ವಿಮಾನ ನಿಲ್ದಾಣದಲ್ಲಿ ಹಾಜರಿದ್ದು, ತಾಯ್ನಾಡಿಗೆ ಮರಳಿದ ಭಾರತೀಯರಿಗೆ ಭಾರತದ ಬಾವುಟವನ್ನು ಕೊಟ್ಟು ಆತ್ಮೀಯವಾಗಿ ಬರಮಾಡಿಕೊಂಡರು.
ಸಂಘರ್ಷ ಪೀಡಿತ ಇಸ್ರೇಲ್​ನಿಂದ ಸುರಕ್ಷಿತವಾಗಿ ಬಂದ ಭಾರತೀಯರು ಸರ್ಕಾರಕ್ಕೆ ಧನ್ಯವಾದ ಹೇಳಿದರು. ನಾವು ಭಾರತ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ. ನಾವು ಇಸ್ರೇಲ್​ನಲ್ಲಿ ಭಯಭೀತರಾಗಿದ್ದೆವು. ಆಪರೇಷನ್ ಅಜಯ್ ಕಾರ್ಯಾಚರಣೆಗಾಗಿ ನಾವು ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಗಾಜಾಪಟ್ಟಿ ಒಳಕ್ಕೆ ನುಗ್ಗಿದ ಇಸ್ರೇಲ್ ಪಡೆ; ಸರ್ಕಾರದಿಂದಲೇ ಅಧಿಕೃತ ಘೋಷಣೆ
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು 197 ಭಾರತೀಯರು ವಿಮಾನದ ಒಳಗಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಸ್ವದೇಶಕ್ಕೆ ಹಿಂತಿರುಗುವ ಮುನ್ನ ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂದು ಘೋಷಣೆಗಳನ್ನು ಭಾರತೀಯರು ಕೂಗಿದ್ದಾರೆ.
#OperationAjaymoves forward.
197 more passengers are coming back to India.pic.twitter.com/ZQ4sF0cZTE
— Dr. S. Jaishankar (@DrSJaishankar)October 14, 2023

ಮೊದಲ ವಿಮಾನದಲ್ಲಿ 212 ಮಂದಿ ಹಾಗೂ ಎರಡನೇ ವಿಮಾನದಲ್ಲಿ 235 ಮಂದಿ ಸ್ವದೇಶಕ್ಕೆ ಹಿಂತಿರುಗಿದ್ದಾರೆ. ಇದೀಗ ಮೂರನೇ ವಿಮಾನದಲ್ಲಿ 197 ಮಂದಿ ವಾಪಾಸ್ಸಾಗಿದ್ದು, ಆಪರೇಷನ್​ ಅಜಯ್​ ಮುಂದುವರಿದಿದೆ. ಇಸ್ರೇಲ್​ನಲ್ಲಿ 17 ಸಾವಿರ ಭಾರತೀಯರು ನೆಲೆಸಿದ್ದಾರೆ.
ಇಸ್ರೆಲ್​ನ ಟೆಲ್​ ಅವೀವ್​ನಲ್ಲಿರುವ ಬೆನ್​ ಗುರಿಯಾನ್​ ವಿಮಾನ ನಿಲ್ದಾಣದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದೆ. ಈ ಬೆನ್ ಗುರಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಸ್ರೇಲ್​​ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದು ಲಾಡ್ ನಗರದ ಉತ್ತರ ಹೊರವಲಯದಲ್ಲಿದೆ. ಭಾರತೀಯರ ರಕ್ಷಣೆಗಾಗಿ ಇಸ್ರೇಲ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಿಷನ್​ ಡೇಟಾಬೇಸ್​ ಅನ್ನು ಆರಂಭಿಸಿತು. ಅದರಲ್ಲಿ ಯಾರು ಮೊದಲು ನೋಂದಾಯಿಸಿಕೊಂಡರೋ ಅವರಿಗೆ ಮೊದಲ ಹಂತದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಪ್ರಯಾಣದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ.
ಭಾರತೀಯರಿಗೆ ಸಹಾಯವಾಣಿಇಸ್ರೇಲ್ – ಹಮಾಸ್ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ನೆರವು ನೀಡಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ 24 ಗಂಟೆಗಳ ಸಹಾಯ ವಾಣಿ ಸ್ಥಾಪಿಸಿದೆ. 1800118797 (ಟೋಲ್ ಫ್ರೀ), +91-11 23012113, +91-11-23014104, +91-11-23017905 ಮತ್ತು +919968291988ಗೆ ಸಂಪರ್ಕ ಮಾಡಬಹುದು. ಅಥವಾ room.gov ಗೆ ಇ ಮೇಲ್ ಮಾಡಬಹುದು. ಟೆಲ್ ಅವಿವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹ 24 ಗಂಟೆಗಳ ಸಹಾಯವಾಣಿ ಸ್ಥಾಪಿಸಿದೆ. ಅಗತ್ಯ ಇರುವವರು +972- 35226748, +972-543278392ಗೆ ಸಂರ್ಪಸಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೇಲ್- ಪ್ಯಾಲೆಸ್ತೀನ್ ವಿವಾದವೇನು?ಇಸ್ರೇಲ್- ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಸುಮಾರು ನೂರು ವರ್ಷಗಳಿಂದ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಪಟ್ಟಿ ಮತ್ತು ಗೋಲನ್ ಹೈಟ್ಸ್ ಇನ್ನಿತರ ಪ್ರದೇಶಗಳ ಮೇಲಿನ ಹಕ್ಕಿನ ಬಗ್ಗೆ ಎರಡೂ ದೇಶಗಳ ನಡುವೆ ವಿವಾದ ಇದೆ. ಪೂರ್ವ ಜೆರುಸಲೆಮ್ ಸೇರಿ ಈ ಪ್ರದೇಶಗಳನ್ನು ಪ್ಯಾಲೆಸ್ತೀನ್ ತನ್ನದು ಎಂದು ಹೇಳಿಕೊಳ್ಳುತ್ತಿದೆ. ಆದರೆ ಇಸ್ರೇಲ್ ಜೆರುಸಲೆಮ್ ಮೇಲಿನ ಹಕ್ಕನ್ನು ಸಾಧಿಸುತ್ತಿದೆ.
ಗಾಜಾ ಪಟ್ಟಿ ಎಂದರೇನು? :ಗಾಜಾ ಪಟ್ಟಿ ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಇದೆ. ಈ ಸ್ಥಳವು ಪ್ರಸ್ತುತ ಹಮಾಸ್ ಉಗ್ರರ ನಿಯಂತ್ರಣದಲ್ಲಿದೆ. ಹಮಾಸ್ ಎಂಬುದು ಇದು ಇಸ್ರೇಲ್ ವಿರೋಧಿ ಗುಂಪು. ಸೆಪ್ಟೆಂಬರ್ 2005 ರಲ್ಲಿ ಇಸ್ರೇಲ್, ಗಾಜಾ ಪಟ್ಟಿಯಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಂಡಿತು. ನಂತರ ಈ ಪ್ರದೇಶದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿತು. ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯವನ್ನು ಸ್ಥಾಪಿಸಬೇಕು ಎಂದು ಪ್ಯಾಲೆಸ್ತೀನ್ ಹೋರಾಟ ನಡೆಸುತ್ತಿದೆ.(ಏಜೆನ್ಸೀಸ್​)
ಆಪರೇಷನ್​ ಅಜಯ್​: ಯುದ್ಧ ಪೀಡಿತ ಇಸ್ರೇಲ್​ನಿಂದ ತವರಿಗೆ ಮರಳಿದ 212 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಬಿರುಸು

ಭಾರತದ ಗೆಲುವಿಗೆ ದೇಶಾದ್ಯಂತ ಮುಗಿಲುಮುಟ್ಟಿದ ಸಂಭ್ರಮಾಚರಣೆ; ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ

BIGGBOSS KANNADA SEASON 10: ತುಕಾಲಿ ಸಂತೋಷ್ ಹುಟ್ಟಿದ್ದೇ ಪವಾಡವಂತೆ; ಶಾಕ್​​ ಆದ ಸ್ಪರ್ಧಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 15 =
Remember me
