ನವದೆಹಲಿ:ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಬರಹವಿದ್ದ ಬ್ಯಾನರ್​ ಹಿಡಿದು ದೆಹಲಿಯ ವಿಜಯ್​ ಚೌಕ್​ನಿಂದ ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳ ನಾಯಕರನ್ನು ಚದುರಿಸಿದ ಪೊಲೀಸರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದರನ್ನು ವಶಕ್ಕೆ ಪಡೆದು, ಬಸ್​ನಲ್ಲಿ ತುಂಬಿಕೊಂಡು ಸಮೀಪದ ಪೊಲೀಸ್​ ಠಾಣೆಗಳಿಗೆ ಕರೆದೊಯ್ಯಲಾಯಿತು. ಪ್ರತಿಭಟನೆ ಹಿನ್ನೆಲೆಯ ಭಾರೀ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿತ್ತು. ಪ್ರತಿಭಟನೆ ನಡೆಸಲು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ಭೇಟಿಗೆ ರಾಷ್ಟ್ರಪತಿಗಳು ಸಹ ಸಮಯ ನೀಡಿರಲಿಲ್ಲ ಎಂದು ಹೇಳಲಾಗಿದೆ.
ಅದಾನಿ-ಹಿಂಡೆನ್‌ಬರ್ಗ್ ವಿವಾದ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಮರು ಒತ್ತಾಯಿಸಿರುವ ಪ್ರತಿಪಕ್ಷಗಳು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಬಯಸುತ್ತಿವೆ. 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರಿಗೆ ಸೂರತ್​ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿರುವುದನ್ನು ಖಂಡಿಸಿರುವ ಪ್ರತಿಪಕ್ಷದ ನಾಯಕರು, ತಮ್ಮ ಸ್ನೇಹಿತ ಗೌತಮ್​ ಅದಾನಿ ಕಂಪನಿಯಲ್ಲಾಗಿರುವ ಹಗರಣವನ್ನು ಮುಚ್ಚಿ ಹಾಕಲು ಮತ್ತು ಜನರ ಗಮನವನ್ನು ಬೇರೆ ಸೆಳೆಯುವ ಪ್ರಧಾನಿ ಮೋದಿ ಅವರ ಪ್ರಾಯೋಜಿತ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ. ಹಿಂಡೆನ್‌ಬರ್ಗ್ ವರದಿಯ ಬಳಿಕ ಅದಾನಿ ಷೇರುಗಳು ತೀವ್ರ ಕುಸಿತಕಂಡವು. ಈ ವೇಳೆ ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದ LIC ಮತ್ತು SBI ನಂತಹ ಸರ್ಕಾರಿ ಸಂಯೋಜಿತ ಕಂಪನಿಗಳಲ್ಲಿ ಇರಿಸಲಾದ ಸಾರ್ವಜನಿಕ ಹಣವು ಭಾರಿ ನಷ್ಟ ಅನುಭವಿಸಿವೆ ಎಂಬುದು ಪ್ರತಿಪಕ್ಷಗಳ ಆರೋಪವಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಶಾಸಕರ ಅಭಿಮಾನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ದು ಯಾಕೆ?
ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳು ಏಕಕಾಲದಲ್ಲಿ ಇಂದು ಪ್ರತಿಭಟನೆಗಳನ್ನು ಆರಂಭಿಸಿವೆ. ಕೇಂದ್ರ ಸರ್ಕಾರದ ವಿರುದ್ಧ ದ್ವೇಷದ ರಾಜಕೀಯ ಆರೋಪ ಮಾಡಿವೆ. ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪಕ್ಷದ ಇತರೆ ಮುಖಂಡರು ಮತ್ತು ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.
ರಾಹುಲ್​ ಗಾಂಧಿಯವರು ಮೋದಿ ಉಪನಾಮದ ಹೇಳಿಕೆಯ ಮೂಲಕ ಒಬಿಸಿ ಸಮುದಾಯವನ್ನು ಅವಮಾನಿಸಿದ ಬಳಿಕ ಸ್ವತಂತ್ರ ನ್ಯಾಯಾಂಗದಿಂದ ಶಿಕ್ಷೆಗೆ ಗುರಿಯಾಗಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಕಾಂಗ್ರೆಸ್​ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದರು.
ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳ ನಾಯಕರನ್ನು ಬೇಟೆಯಾಡುತ್ತಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.(ಏಜೆನ್ಸೀಸ್​)
ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಬಿಗ್​ ಶಾಕ್​: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ

ಹಾಲಿಗಾಗಿ ಅಂಗಡಿಗೆ ಹೋಗಬೇಕಾಗಿಲ್ಲ..ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಫ್ರೆಶ್‌ ಮಿಲ್ಕ್

ಟಾಲಿವುಡ್ ನಟ ನರೇಶ್, ಪವಿತ್ರಾ ಲೋಕೇಶ್ ಮದುವೆ ರಿಯಲ್ ಅಲ್ಲ ರೀಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + fifteen =
Remember me
