ನವದೆಹಲಿ:ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, ‘ಇಂಡಿಯಾ’ ಮೈತ್ರಿಕೂಟದ ಬಲವೂ ಹೆಚ್ಚಿರುವುದರಿಂದ 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಗಳಿವೆ. ಆದರೆ, ವಿರೋಧ ಪಕ್ಷದ ನಾಯಕನ ಜವಾಬ್ದಾರಿ ತೆಗೆದುಕೊಳ್ಳಲು ರಾಹುಲ್ ನಿರಾಕರಿಸಿದ್ದಾರೆ ಎಂಬುದು ಪಕ್ಷದ ಮೂಲಗಳ ಇತ್ತೀಚಿನ ಮಾಹಿತಿ.
ಇದನ್ನೂ ಓದಿ:ರಾಜನ ಬರ್ತ್ ಡೇಗೆ ಕಾವಲಿದ್ದಾಗಲೇ ಚುಂಬಿಸಿ ಮದುವೆ​..ಬಕಿಂಗ್​ಹ್ಯಾಂ ಪ್ಯಾಲೇಸ್​ನಲ್ಲಿ ವಿಚಿತ್ರ ವಿವಾಹ!
ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಮೂರು ಹೆಸರುಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. ಕುಮಾರಿ ಸೆಲ್ಜಾ, ಗೌರವ್ ಗೊಗೊಯ್ ಮತ್ತು ಮನೀಶ್ ತಿವಾರಿ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 232 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಅದರಲ್ಲಿ ಕಾಂಗ್ರೆಸ್ 99 ಸ್ಥಾನ ಗಳಿಸಿದೆ. ಇದರೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಕಾಂಗ್ರೆಸ್ ಗೆ ಖಚಿತವಾಗಿದೆ.
ಈ ಜವಾಬ್ದಾರಿಯನ್ನು ರಾಹುಲ್ ವಹಿಸಿಕೊಂಡರೆ ಸಂಪುಟ ದರ್ಜೆ ಸ್ಥಾನಮಾನ ಪಡೆದು, ಮೈತ್ರಿಕೂಟದ ನಾಯಕರ ನಡುವೆ ಉತ್ತಮ ಸಮನ್ವಯ ಸಾಧಿಸಲಿದ್ದಾರೆ ಎಂಬುದು ಕಾಂಗ್ರೆಸ್ ಅಭಿಪ್ರಾಯ. ಆದರೆ ರಾಹುಲ್ ಅದಕ್ಕೆ ಸಿದ್ಧರಿಲ್ಲವಂತೆ. 2019 ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ರಾಹುಲ್ ಯಾವುದೇ ಹುದ್ದೆಯನ್ನು ವಹಿಸಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.
‘ನಿಮ್ಮ ಕಾಲು ಹಿಡೀತೀನಿ, ನನ್ನ ಬಿಟ್ಟುಬಿಡಿ ಪ್ಲೀಸ್..’: ವರಸೆ ಬದಲಿಸಿದ ಪೊಲೀಸರ ಎದುರು ಮಂಡಿಯೂರಿದ ನಟ ದರ್ಶನ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − eleven =
Remember me
