ನವದೆಹಲಿ:ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಸಮಯದಲ್ಲಿ ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ನೀಡುವ ವೇಳೆ ಸಭಾತ್ಯಾಗ ಮಾಡಿ ಪ್ರತಿಪಕ್ಷಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಅಪಾಯಕಾರಿ ಉದಾಹರಣೆಯನ್ನು ಸ್ಥಾಪಿಸಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್​​ ಬುಧವಾರ (ಜುಲೈ 3) ಹೇಳಿದ್ದಾರೆ.
ಇದನ್ನು ಓದಿ:ನಂಬಿಕೆ ಕಳೆದುಕೊಂಡಿರುವ ನೀಟ್​ ಪರೀಕ್ಷೆಯನ್ನು ರದ್ದುಗೊಳಿಸುವುದು ಸೂಕ್ತ: ದಳಪತಿ ವಿಜಯ್​
ಭಾರತದ ಸಂವಿಧಾನಕ್ಕೆ ಇದಕ್ಕಿಂತ ದೊಡ್ಡ ಅವಮಾನ ಇರಲಾರದು. ಅವರ ನಡವಳಿಕೆಯನ್ನು ಖಂಡಿಸುತ್ತೇನೆ. ಅವರು ಭಾರತೀಯ ಸಂವಿಧಾನದ ಆಶಯಕ್ಕೆ ಅಪಮಾನ ಮಾಡಿದ್ದಾರೆ. ಇದು ಭಾರತೀಯ ಸಂವಿಧಾನಕ್ಕೆ ಸವಾಲೆಸೆದ ಸಂದರ್ಭವಾಗಿದೆ. ಅವರು ಮಾಡಿದ ಪ್ರತಿಜ್ಞೆಯನ್ನು ಅವರೇ ನಿರ್ಲಕ್ಷಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಸಿಡಿದರು. ಜತೆಗೆ ಭಾರತೀಯ ಸಂವಿಧಾನವು ನಿಮ್ಮ ಕೈಯಲ್ಲಿ ಹಿಡಿಯುವ ವಸ್ತುವಲ್ಲ, ಅದು ಬದುಕಲು ಪುಸ್ತಕವಾಗಿದೆ. ಅವರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಮತ್ತು ಕರ್ತವ್ಯದ ಮಾರ್ಗವನ್ನು ಅನುಸರಿಸುತ್ತಾರೆ ಎಂದು ಭಾವಿಸುತ್ತೇನೆ ಎಂದರು.
ಪ್ರಧಾನಿ ಮೋದಿಯವರ ಭಾಷಣದ ವೇಳೆ ಮಧ್ಯಪ್ರವೇಶಿಸಲು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕರು ರಾಜ್ಯಸಭೆಯಿಂದ ಹೊರನಡೆದರು. ಯಾವುದೇ ಆಕ್ಷೇಪಣೆಯಿಲ್ಲದೆ ಮಾತನಾಡಲು ಅವರಿಗೆ ಅವಕಾಶ ನೀಡಿದ್ದೇನೆ. ಆದರೆ ಇಂದು ಅವರು ಕೇವಲ ಸದನವನ್ನು ಬಿಟ್ಟಿಲ್ಲ, ಸದನದ ಘನತೆಯನ್ನು ತೊರೆದಿದ್ದಾರೆ. ನನಗೆ ಮಾತ್ರ ಬೆನ್ನು ಹಾಕಿಲ್ಲ, ಭಾರತದ ಸಂವಿಧಾನದ ಮೇಲೆಯೇ ತಿರುಗಿದ್ದಾರೆ ಎಂದು ಹೇಳಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ವೇಳೆ ಪ್ರಧಾನಿ ಮೋದಿ ಪ್ರತಿಕ್ರಿಯಿಸುತ್ತಿದ್ದ ಸಮಯದಲ್ಲಿ ಪ್ರತಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಲಾರಂಭಿಸಿದರು. ಸದನದಲ್ಲಿ ಕೆಲಕಾಲ ಕೋಲಾಹಲ ಸೃಷ್ಟಿಯಾದ ಬಳಿಕ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿ ಸಂಸತ್ ಭವನದಿಂದ ಹೊರ ನಡೆದವು. (ಏಜೆನ್ಸೀಸ್​​)
ಗುಜರಾತ್​ ಕಾಂಗ್ರೆಸ್​​ ಕಚೇರಿ ಮೇಲೆ ದಾಳಿ; ರಾಹುಲ್​ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
