ನವದೆಹಲಿ:ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನದ ಬಗ್ಗೆ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ರೆಡ್​ಲೈಟ್​ ಬಳಕೆ..ಪೊಲೀಸರ ವಶಕ್ಕೆ ಐಎಎಸ್ ಪೂಜಾಖೇಡ್ಕರ್ ಆಡಿ ಕಾರು!
ಇಂತಹ ಕೃತ್ಯಗಳನ್ನು ಬಲವಾಗಿ ಖಂಡಿಸಬೇಕು ಎಂದು ‘ಎಕ್ಸ್’ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಟ್ರಂಪ್ ಅವರನ್ನು ಹತ್ಯೆ ಮಾಡುವ ಪ್ರಯತ್ನದ ಬಗ್ಗೆ ನಾನು ತೀವ್ರ ಕಳವಳ ಹೊಂದಿದ್ದೇನೆ. ಇಂತಹ ಕೃತ್ಯಗಳನ್ನು ಅತ್ಯಂತ ಪ್ರಬಲ ಪದಗಳಲ್ಲಿ ಖಂಡಿಸಬೇಕು. ಟ್ರಂಪ್ ಶೀಘ್ರ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಶನಿವಾರ ದಾಳಿಕೋರನೊಬ್ಬ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಚುನಾವಣಾ ಸಮಾವೇಶದ ವೇಳೆ ನಡೆದ ದಾಳಿಯಲ್ಲಿ ವೇದಿಕೆಯ ಕಡೆಗೆ ಶಂಕಿತ ದಾಳಿಕೋರನೊಬ್ಬ ಹಲವಾರು ಸುತ್ತು ಗುಂಡುಗಳನ್ನು ಹಾರಿಸಿದ್ದಾನೆ. ಒಂದು ಬುಲೆಟ್ ಟ್ರಂಪ್ ಅವರ ಬಲ ಕಿವಿಯ ಮೇಲೆ ತಗುಲಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ ಸಾರ್ವಜನಿಕರೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಸ್ಸಾಂನಲ್ಲಿ ಮುಂದುವರಿದ ಪ್ರವಾಹ.. ಏಳು ಮಂದಿ ಮೃತ್ಯು- ಸಾವಿನ ಸಂಖ್ಯೆ 90 ಕ್ಕೆ ಏರಿಕೆ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × 3 =
Remember me
