ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media)ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಲಕ್ಷ ರೂ….16 ಲಕ್ಷ ರೂ.ಬೆಲೆ ಬಾಳುವ ಸೀರೆಗಳು ವಶಕ್ಕೆ!
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲಿನಿಂದ ಕೂಡಿದ ಮೈದಾನದ ಒಂದು ಭಾಗವನ್ನು ನೋಡಬಹುದು. ಫೋಟೋದ ಒಂದು ಭಾಗದಲ್ಲಿ ಟೆನಿಸ್​ ಬಾಲ್​ ಒಂದು ಬಿದ್ದಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಟೆನಿಸ್​ ಬಾಲ್​ ಬಣ್ಣ ಮತ್ತು ಹುಲ್ಲಿನಿಂದ ಕೂಡಿರುವ ಮೈದಾನ ಪ್ರದೇಶದ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ಟೆನಿಸ್​ ಬಾಲ್​ ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಟೆನಿಸ್​ ಬಾಲ್​ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಟೆನಿಸ್​ ಬಾಲ್​ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಟೆನಿಸ್​ ಬಾಲ್​ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಮತ್ತೆ ಕನ್ನಡಕ್ಕೆ ಶಿಲ್ಪಾ ಶೆಟ್ಟಿ; ಪ್ರೇಮ್​ ನಿರ್ದೇಶನದ ‘ಕೆಡಿ’ ಚಿತ್ರದಲ್ಲಿ ನಟನೆ

ಬೃಂದಾ ಆಚಾರ್ಯ ಈಗ ಶಿವಾನಿ; ‘ಕೌಸಲ್ಯಾ ಸುಪ್ರಜಾ ರಾಮ’ ಚಿತ್ರಕ್ಕೆ ಸೇರ್ಪಡೆ

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ: ಕೋಲಾರದಲ್ಲಿ ದುಷ್ಕೃತ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − seven =
Remember me
