ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿಯಾಗಿದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಹಿಮದಿಂದ ಆವೃತವಾಗಿರುವ ಪ್ರದೇಶವನ್ನು ಕಾಣಬಹುದು. ಅವುಗಳ ನಡುವೆ ಮರಗಳಿದ್ದು, ಅವು ಕೂಡ ಹಿಮದಿಂದ ಹೊದಿಸಲ್ಪಟ್ಟಿದೆ. ಆದರೆ, ಫೋಟೋದ ಒಂದು ಭಾಗದಲ್ಲಿ ಹಿಮಕರಡಿಯೊಂದು ನಿಂತಿದೆ. ಅದನ್ನು ನೀವು ಪತ್ತೆಹಚ್ಚಬೇಕು. ಆದರೆ, ಅದು ಅಷ್ಟು ಸುಲಭವಲ್ಲ. ಏಕೆಂದರೆ, ಹಿಮಕರಡಿಯ ಬಣ್ಣವೂ ಕೂಡ ಹಿಮದ ಬಣ್ಣವಾಗಿದ್ದು, ಫೋಟೋದಲ್ಲಿ ಒಂದನ್ನೊಂದು ಬೆರೆತು ಹೋಗಿವೆ. ಫೋಟೋ ನೋಡಿದರೆ ತಕ್ಷಣಕ್ಕೆ ಹಿಮಕರಡಿ ಎಲ್ಲಿದೆ ಎಂಬುದು ತಿಳಿಯುವುದಿಲ್ಲ. ತೀಕ್ಷ್ಣ ದೃಷ್ಟಿಯುಳ್ಳವರು ಹಾಗೂ ಬುದ್ಧಿವಂತರು ಮಾತ್ರ ಹಿಮಕರಡಿಯನ್ನು ಹುಡುಕಬಲ್ಲರು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಹಿಮಕರಡಿಯು ಫೋಟೋದ ಯಾವ ಭಾಗದಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಕಣ್ಣಿನ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಹಿಮಕರಡಿಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹಿಮಕರಡಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡಿ ಸುಸ್ತಾಗಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಗಂಡನ ಮನೆಗೆ ಹೋಗಲ್ಲ ಅಂತಾ ಪಟ್ಟು ಹಿಡಿದ ನವವಿವಾಹಿತೆ ಬಸ್ ನಿಲ್ದಾಣದ ಟಾಯ್ಲೆಟ್​ನಲ್ಲಿ ನಿಗೂಢ ನಾಪತ್ತೆ!​

ಕಾಂತಾರ ಮತ್ತು ರಿ‍ಷಭ್ ಶೆಟ್ಟಿ ಬಗ್ಗೆ ನಟಿ ಅನಸೂಯ ಭಾರದ್ವಜ್​ ಮಾಡಿದ ಕಾಮೆಂಟ್​ ವೈರಲ್​!

ಯುವಕನಿಂದ ಖಾಸಗಿ ಅಂಗಗಳ ಸ್ಪರ್ಶ! ಹಳದಿ ಬಣ್ಣದ ಬಟ್ಟೆಗೆ ಹೆದರುವ ನಟಿ ಐಶ್ವರ್ಯಾರ ನೋವಿನ ಕತೆಯಿದು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − 8 =
Remember me
