ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಬೃಹತ್​ ಮರದ ಕಾಂಡಗಳನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಒಂದು ಪಕ್ಷಿ ಇದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಮರದ ಕೊಂಬೆ ಮತ್ತು ಹಸಿರು ಎಲೆಗಳ ನಡುವೆ ಪಕ್ಷಿ ಬೆರೆತು ಹೋಗಿದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಪಕ್ಷಿ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಪಕ್ಷಿಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಪಕ್ಷಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ನಟಿ ರಶ್ಮಿಕಾ ಮಂದಣ್ಣ ಬಳಿ ಕ್ಷಮೆಯಾಚಿಸಿದ ಕ್ರಿಕೆಟಿಗ ಡೇವಿಡ್​ ವಾರ್ನರ್: ಕಾರಣ ಈ ಒಂದು ವಿಡಿಯೋ….​

ನಮ್ಮ ಅವಧಿಯಲ್ಲಿ ಮತದಾರರ ಮಾಹಿತಿ ದುರ್ಬಳಕೆಯಾಗಿದ್ರೆ ನಮ್ಮನ್ನು ಬಂಧಿಸಲಿ: ಸರ್ಕಾರಕ್ಕೆ ಡಿಕೆಶಿ ಸವಾಲು

PSI ಹುದ್ದೆ ನೇಮಕಾತಿ ಅಕ್ರಮ: ರಚನಾ ಸೇರಿ 11 ಮಂದಿಗೆ ಜಾಮೀನು ಮಂಜೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
