ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಅರಣ್ಯ ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಜಿಂಕೆ (Deer) ಯೊಂದು ನಿಂತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅರಣ್ಯ ಪ್ರದೇಶ ಬಣ್ಣ ಮತ್ತು ಜಿಂಕೆ ಬಣ್ಣಕ್ಕೆ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿವೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಜಿಂಕೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಜಿಂಕೆಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಜಿಂಕೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಮಗಳ ಬೆಡ್​ರೂಮ್​ನಿಂದ ಬರ್ತಿದ್ದ ಹೊಗೆಯನ್ನು ನೋಡಿ ಬಾಗಿಲು ತೆರೆದ ತಂದೆಗೆ ಕಾದಿತ್ತು ಭಾರಿ ಆಘಾತ!​​

ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ತೆಲುಗು ನಿರ್ಮಾಪಕರ ಒಳಜಗಳ; ಹಬ್ಬಗಳಲ್ಲಿ ಟಾಲಿವುಡ್ ಚಿತ್ರಗಳ ಬಿಡುಗಡೆಗೆ ಆದ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
