ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಎಸ್​.ಟಿ. ಸೋಮಶೇಖರ್​ ನೀಡಿದ ಕಾರಣಗಳಿವು…
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಗಿಡ-ಗಂಡಿಗಳು ಬೆಳೆದಿರುವ ಕಾಡಿನ ಒಂದು ಭಾಗವನ್ನು ನೋಡಬಹುದು. ಫೋಟೋದ ಒಂದು ಭಾಗದಲ್ಲಿ ಹುಲಿಯೊಂದು ಮಲಗಿದೆ. ಅದನ್ನು ಪತ್ತೆಹಚ್ಚಬೇಕು. ಆದರೆ, ಅದು ಸುಲಭದ ಮಾತಲ್ಲ. ಏಕೆಂದರೆ, ಗಿಡ-ಗಂಟಿಗಳ ಬಣ್ಣಕ್ಕೂ ಹುಲಿಯ ಬಣ್ಣಕ್ಕೂ ಸಾಮ್ಯತೆ ಇರುವುದರಿಂದ ನಮ್ಮ ಕಣ್ಣುಗಳನ್ನೇ ಗೊಂದಲಕ್ಕೆ ದೂಡುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಹುಲಿ ಕಾಣುತ್ತದೆ. ನಿಮಗೆ 5 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಹುಲಿ ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್​
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಹುಲಿಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹುಲಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತ ಹುಡುಕಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ತಾಳ್ಮೆ, ಸಹಬಾಳ್ವೆಯ ಸಂಕೇತವಾಗಿದ್ದ ಜಗತ್ತಿನ ಅತ್ಯಂತ ಮುದಿ ಸಿಂಹ ಹತ್ಯೆ!

ಫೈವ್​ ಸ್ಟಾರ್​ ಹೋಟೆಲ್​ನಲ್ಲಿ ವೇಶ್ಯಾವಾಟಿಕೆ ದಂಧೆ: ಖಾತ ನಟಿ, ಮಾಡೆಲ್​ ಬಂಧನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − six =
Remember me
