ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್​ ಗಾಂಧಿ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗಿದೆ…
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಮನೆಯೊಂದರ ಅಡುಗೆ ಕೋಣೆಯನ್ನು ನೋಡಬಹುದು. ಅಡುಗೆ ಮನೆಯಲ್ಲಿ ಎರಡು ಬೆಕ್ಕುಗಳಿವೆ. ಆದರೆ, ಒಂದು ಬೆಕ್ಕನ್ನು ಮಾತ್ರ ಸುಲಭವಾಗಿ ಪತ್ತೆಹಚ್ಚಬಹುದು. ಆದರೆ, ಇನ್ನೊಂದು ಬೆಕ್ಕನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಆ ಬೆಕ್ಕು ಸುಲಭವಾಗಿ ಕಣ್ಣಿಗೆ ಕಾಣದಂತೆ ಅಡಗಿ ಕುಳಿತಿದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಬೆಕ್ಕನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಎರಡೂ ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:7 ವರ್ಷದ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನುಷ ಹಲ್ಲೆ; ಪ್ರಾಣ ಕಳೆದುಕೊಂಡ ಬಾಲಕ
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಎರಡೂ ಬೆಕ್ಕನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಎರಡೂ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

ನಿಮ್ಮ ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆಹಚ್ಚಲು ಸಾಧ್ಯ!

ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಹುಲಿ ಪತ್ತೆ ಹಚ್ಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
