ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಕುರಿಗಳ ಹಿಂಡಿನ ನಡುವೆ ತೋಳವೊಂದು ಸೇರಿಕೊಂಡು ಬಿಟ್ಟಿದೆ. ಅದು ಎಲ್ಲಿದೆ ಅಂತಾ ನೀವು ಗುರುತಿಸಬೇಕಾಗಿದೆ. ಆದರೆ, ಗುರುತಿಸುವುದು ಅಷ್ಟು ಸುಲಭದ ಕೆಲಸವಲ್ಲ. ಇಲ್ಲಿ ನಿಮ್ಮ ಮೆದುಳಿಗೆ ಸಾಕಷ್ಟು ಕೆಲಸ ಕೊಡಬೇಕಾಗಿದೆ. ಏಕೆಂದರೆ, ಫೋಟೋದಲ್ಲಿ ಇರುವುದು ಹತ್ತಾರು ಕುರಿಗಳಲ್ಲ ಬದಲಾಗಿ ನೂರಾರು ಕುರಿಗಳು. ಅವುಗಳ ಮಧ್ಯೆ ಒಂದೇ ಒಂದು ತೋಳ ಸೇರಿಕೊಂಡಿದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ತೋಳವನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು….

10 ಸೆಕೆಂಡ್​ ಸಮಯದಲ್ಲಿ ನೀವು ತೋಳವನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯಕ್ಕೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ತೋಳವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ನಿಮ್ಮ ಕಣ್ಣಿಗೊಂದು ಸವಾಲು: 15 ಸೆಕೆಂಡಿನಲ್ಲಿ ಈ ಚಿತ್ರದಲ್ಲಿರೋ ಹಾವನ್ನು ಪತ್ತೆ ಹಚ್ಚುವಿರಾ?

ಕೊಹ್ಲಿಗೆ ಬಾಬರ್ ಮಾಡಿದ್ದ​ ಟ್ವೀಟ್​ ಕಾಪಿ ಮಾಡಿ ತಿರುಗೇಟು: ಅಮಿತ್​ ಮಿಶ್ರಾ ಮೇಲೆ ಅಫ್ರಿದಿಗೆ ಯಾಕಿಷ್ಟು ಕೋಪ?

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಧ್ವಜಾರೋಹಣಕ್ಕೆ ಯತ್ನ, 15 ಕ್ಕೂ ಹೆಚ್ಚು ಮಂದಿ ಬಂಧನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − 6 =
Remember me
