ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಮೋಜಿನ ಮಾರ್ಗಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತವೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಒಂದು ನಾಯಿ ಪೂರ್ವ ದಿಕ್ಕಿಗೆ ಮತ್ತು ಇನ್ನೊಂದು ನಾಯಿ ಪಶ್ಚಿಮಕ್ಕೆ ಬರುತ್ತಿರುವುದನ್ನು ಕಾಣಬಹುದು. ನೋಡಲು ಹಿಮ ಪ್ರದೇಶದಂತಿದೆ. ಸ್ಪಷ್ಟವಾಗಿ ಗೋಚರಿಸುವ ಎರಡು ನಾಯಿಗಳ ನಡುವೆ ಓರ್ವ ವ್ಯಕ್ತಿ ನಡೆದುಕೊಂಡು ಹೋಗುತ್ತಿರುವಂತೆ ಕಾಣುತ್ತದೆ. ಅದೇ ಫೋಟೋದಲ್ಲಿ ಇನ್ನೊಂದು ಅಂದು 3ನೇ ನಾಯಿಯು ಇದೆ. ಅದು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಇನ್ನೊಂದು ನಾಯಿ ಎಲ್ಲಿದೆ ಎಂಬುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ 3ನೇ ಶ್ವಾನವನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ 3ನೇ ಶ್ವಾನವನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಅಲ್ಲದೆ, ನಿಮ್ಮಂತಹ ಜೀನಿಯಸ್​ ಯಾರೂ ಇಲ್ಲ ಎಂದು ಭಾವಿಸಿ. ಒಂದು ವೇಳೆ ನಿಮ್ಮಿಂದ 3ನೇ ನಾಯಿಯ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. ಕೆಳಗಿರುವ ಫೋಟೋದಲ್ಲಿ ನಾವು ವ್ಯಕ್ತಿ ಎಂದು ಭಾವಿಸಿರುವುದೇ 3ನೇ ನಾಯಿ. ನೋಡಲು ಮನುಷ್ಯನಂತೆ ಕಾಣುತ್ತದೆ ಅಷ್ಟೆ.(ಏಜೆನ್ಸೀಸ್​)

ಹೆಚ್ಚಾಗಲಿದೆ ಜೆಎನ್​.1 ಪ್ರಕರಣಗಳ ಸಂಖ್ಯೆ, ಹೆದರುವ ಅಗತ್ಯವಿಲ್ಲ: ಹೀಗೆಂದು ಹೇಳಿದೆ ಉನ್ನತ ವೈದ್ಯಕೀಯ ಸಂಸ್ಥೆ

25 ಕೋಟಿ ಮೌಲ್ಯದ ಲಕ್ಷುರಿ ಮನೆ ಹೊಂದಿರುವ ಈ ಯೂಟ್ಯೂಬರ್​ ಆದಾಯ ಕೇಳಿದ್ರೆ ದಂಗಾಗ್ತೀರಿ!

ಹೌದು ಇದು ಮೊಬೈಲ್​ ಚಾರ್ಜರ್ರೇ ಆದ್ರೆ… ಸತ್ಯ ಒಪ್ಕೊಂಡ ಮೈಕಲ್​, ಯಾರಪ್ಪ ಆ ಭಗವಂತ ಅಂದ್ರು ವಿನಯ್!​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − one =
Remember me
