ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಮಹಿಳೆಯ ಹೃದಯ ಕಿತ್ತು ಸಂಬಂಧಿಕರಿಗೆ ಉಣಬಡಿಸಿ ಅವರನ್ನೂ ಹತ್ಯೆಗೈದಿದ್ದ ರಾಕ್ಷಸನಿಗೆ ಜೀವಾವಧಿ ಶಿಕ್ಷೆ!
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಮರಗಳಿಂದ ಕೂಡಿದ ಒಣಗಿದ ಎಲೆಗಳು ಉದುರಿರುವ ಪ್ರದೇಶವನ್ನು ಕಾಣಬಹುದು. ಫೋಟೋದ ಒಂದು ಭಾಗದಲ್ಲಿ ಒಂದು ನಾಯಿ ಇದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಎಲೆಗಳ ಬಣ್ಣ ಮತ್ತು ನಾಯಿಯ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ಶ್ವಾನ ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಶ್ವಾನ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ಚಾಲಕ ರಹಿತ ಮೆಟ್ರೋ ಸೇವೆ ಮೂಲಕ ಚೆನ್ನೈ ಮೆಟ್ರೋದಿಂದ ಕ್ರಾಂತಿಕಾರಕ ಬದಲಾವಣೆ
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಶ್ವಾನವನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಶ್ವಾನವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಸಾಲಿಗ್ರಾಮ ಕಲ್ಲುಗಳು ಎಂದು ಹೇಳಿಕೊಂಡು ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದವರು ಅಂದರ್!

ರಾಹುಲ್​ ಗಾಂಧಿ ಕ್ಷಮೆ ಕೇಳೋವರೆಗೂ ಸಂಸತ್ತಿನಲ್ಲಿ ಮಾತನಾಡಲು ಬಿಡುವುದಿಲ್ಲ: ಬಿಜೆಪಿ ಆಗ್ರಹ

ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಚ್ಚಾಟ ಮಾಡುತ್ತಾ ಹುಟ್ಟುಹಬ್ಬ ಆಚರಿಸಿಕೊಂಡ ಯೂಟ್ಯೂಬರ್ ಅಂದರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 8 =
Remember me
