ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಸಹೋದರಿಯನ್ನು ಮುಂದಿಟ್ಟುಕೊಂಡು ಪತಿಯ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಪತ್ನಿಗೆ ಜೈಲು
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಸಿಂಹದ ಗಾಂಭೀರ್ಯ ಮುಖವನ್ನು ನೋಡಬಹುದು. ಸಿಂಹದ ಮುಖದಲ್ಲಿ ಇಲಿಯ ಚಿತ್ರಣವೊಂದು ಬೆರೆತು ಹೋಗಿದೆ. ಅದನ್ನು ಪತ್ತೆಹಚ್ಚುವುದೇ ನಿಮ್ಮ ಇಂದಿನ ಟಾಸ್ಕ್​. ಆದರೆ, ಇಲಿ ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಏಕೆಂದರೆ, ಒಂದು ಟ್ವಿಸ್ಟ್​ ಇಲ್ಲಿ ಅಡಗಿದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿ ಇಲಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ಖಾಸಗಿ ಕ್ಷಣದ ವಿಡಿಯೋ ವೈರಲ್: ಮನನೊಂದು ಸಾವಿಗೆ ಶರಣಾದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು
ಟ್ವಿಸ್ಟ್​ ಹೊರತಾಗಿಯೂ 10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಇಲಿಯನ್ನು ಪತ್ತೆಹಚ್ಚಿದರೆ ನಿಮ್ಮ ಬುದ್ಧಿಮತ್ತೆಗೆ ಸರಿಸಾಟಿ ಯಾರೂ ಉಲ್ಲ. ಒಂದು ವೇಳೆ ಇಲಿಯನ್ನು ಪತ್ತೆಹಚ್ಚಲಾದೇ ಎಲ್ಲಿ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಮೃತ್ಯು

Eshwar Khandre On Karnataka’s Tiger Population | ಕರ್ನಾಟಕದಲ್ಲಿ ಜಾಸ್ತಿ ಆಗುತ್ತಿದೆಯೇ ಹುಲಿ ಸಂತತಿ? | VIJAYAVANI

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 + ten =
Remember me
