ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ನೀನು ನನ್ನ ತಂದೆ ಬಳಿ ಹೋಗು, ನಾನು ಜೈಲಿಗೆ ಹೋಗ್ತೀನಿ! ತಾಯಿಯನ್ನೇ ಕೊಂದ ಕೇಸ್​, ಸ್ಫೋಟಕ ಮಾಹಿತಿ ಬಯಲು ​
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹಸಿರಿನಿಂದ ಆವರಿಸಿದ ಅರಣ್ಯ ಪ್ರದೇಶವನ್ನು ಕಾಣಬಹುದು. ಫೋಟೋದ ಒಂದು ಭಾಗದಲ್ಲಿ ಹುಲಿಯೊಂದು ಕುಳಿತಿದೆ. ಅದನ್ನು ಪತ್ತೆಹಚ್ಚಬೇಕು. ಆದರೆ, ಅದು ಸುಲಭದ ಮಾತಲ್ಲ. ಏಕೆಂದರೆ, ಕಾಡಿನಲ್ಲಿ ಅದು ಅಡಗಿದ್ದು, ನಮ್ಮ ಕಣ್ಣುಗಳನ್ನೇ ಗೊಂದಲಕ್ಕೆ ದೂಡುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಹುಲಿ ಕಾಣುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಹುಲಿ ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ಸರ್ಕಾರಿ ಬಸ್​​ನಲ್ಲಿ ಮಹಿಳೆಯರಿಗೆ ಫ್ರೀ; ಧರ್ಮಸ್ಥಳ, ಕುಕ್ಕೆ ಕ್ಷೇತ್ರದಲ್ಲಿ ಜನವೋ ಜನ!
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಹುಲಿಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹುಲಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತ ಹುಡುಕಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ಮತ್ತು ಹುಲಿ ಇನ್ನು ಸ್ಪಷ್ಟವಾಗಿ ಕಾಣಬೇಕಾದರೆ ಕೆಳಗಿರುವ ವಿಡಿಯೋವನ್ನು ನೋಡಿ, ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

Tiger is a stealth hunter and can hide camouflaged in undergrowth of forest floor easily. But rhesus macaques at tree top can spot them & alert all denizens. Here, the presence of a male Tiger in Pilibhit TR is busted by an alarm call.@byadavbjp@rameshpandeyifs@ntca_indiapic.twitter.com/wXnDxF2RJx
— Sanjay Kumar IAS (@skumarias02)June 7, 2023

ಕಣ್ಣಿಗೊಂದು ಸವಾಲ್​: ಕೇವಲ 5 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಹುಲಿ ಪತ್ತೆಹಚ್ಚುವಿರಾ?

ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಕೇವಲ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ಹುಲಿ ಪತ್ತೆ ಹಚ್ಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nine =
Remember me
