ನವದೆಹಲಿ:ನೂರಕ್ಕೂ ಅಧಿಕ ಮಾಜಿ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಈ ಮೂಲಕ ದೇಶದಲ್ಲಿ ದ್ವೇಷದ ರಾಜಕೀಯ ತೊಲಗಬೇಕು ಎಂದು ಕೇಳಿಕೊಂಡಿದ್ದಾರೆ.
ದೆಹಲಿಯ ಮಾಜಿ ಲೆ.ಗ. ನಜೀರ್ ಜಂಗ್, ಮಾಜಿ ರಾಷ್ಟ್ರೀಯ ಭದ್ರತಾ ಸಲಹಾಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ. ಪಿಳ್ಳೈ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪ್ರಧಾನ ಕಾರ್ಯದರ್ಶಿ ಟಿ.ಕೆ.ಎ. ನಾಯರ್ ಮುಂತಾದ ಪ್ರಮುಖರು ಸೇರಿದಂತೆ ಸುಮಾರು 108 ಮಾಜಿ ಅಧಿಕಾರಿಗಳ ಸಹಿ ಇರುವ ಪತ್ರದ ಮೂಲಕ ಪ್ರಧಾನಿಗೆ ಮನವಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ:ರಾಜಸ್ಥಾನ ಪೊಲೀಸರ ಮನಗೆದ್ದ ‘ಕೆಜಿಎಫ್​-2’ ‘ವಯಲೆನ್ಸ್​’!
ದೇಶ ದ್ವೇಷ ರಾಜಕಾರಣಕ್ಕೆ ಸಾಕ್ಷಿ ಆಗುತ್ತಿದೆ. ಮಾಜಿ ನಾಗರಿಕ ಸೇವಾ ಅಧಿಕಾರಿಗಳಾಗಿರುವ ನಾವು ಇಂಥ ಸಂದರ್ಭದಲ್ಲಿ ನಮ್ಮ ಅನಿಸಿಕೆ ತಿಳಿಸುವುದು ಸೂಕ್ತ ಹಾಗೂ ಅಗತ್ಯ ಅನಿಸುತ್ತಿದೆ. ಬಿಜೆಪಿ ಆಡಳಿತ ಇರುವ ಕರ್ನಾಟಕ, ಉತ್ತರಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಮಧ್ಯಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಅಲ್ಪಸಂಖ್ಯಾತರ ಮೇಲೆ, ಅದರಲ್ಲೂ ಮುಸ್ಲಿಮರ ಮೇಲೆ ದ್ವೇಷ ಸಾಧಿಸಲಾಗುತ್ತಿದೆ. ತಾವು ಮಧ್ಯಪ್ರವೇಶಿಸಿ ‘ಸಬ್​ ಕಾ ಸಾಥ್, ಸಬ್ ಕಾ ವಿಕಾಸ್, ಸಬ್​ ಕಾ ವಿಶ್ವಾಸ್​’ ಮಾತನ್ನು ಉಳಿಸಿಕೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ರಿಮೇಕ್​ ಸಾವು.. ಬಾಲಿವುಡ್​ಗೆ ಬೇಕಿದೆ​ ವ್ಯಾಕ್ಸಿನ್: ನಿರ್ದೇಶಕ ರಾಮ್​ಗೋಪಾಲ್ ವರ್ಮಾ

ಮತ್ತೊಂದು ಪಿಎಸ್​ಐ ನೇಮಕಾತಿಯಲ್ಲೂ ಅಕ್ರಮ?; ಇಲ್ಲೂ ದಿವ್ಯಾ ಹಾಗರಗಿ ಕೈವಾಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
