ಗಾಂಧಿನಗರ​​:ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಇದಕ್ಕೆ ಮುನ್ನುಡಿ ಎಂಬಂತೆ ಪಕ್ಷಾಂತರ ಪರ್ವ ಶುರುವಾಗಿದೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಹಾಗೂ ಎಎಪಿ ಪಕ್ಷದ 2 ಸಾವಿರಕ್ಕೂ ಅಧಿಕ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಗುಜರಾತ್​ನಲ್ಲಿ ಈ ಬೆಳವಣಿಗೆ ನಡೆದಿದ್ದು, ಗಾಂಧಿನಗರದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ 2 ಸಾವಿರಕ್ಕೂ ಅಧಿಕ ಎಎಪಿ ಹಾಗೂ ಕಾಂಗ್ರೆಸ್​ ಮುಖಂಡರು ಬಿಜೆಪಿ ಸೇರಿದ್ದಾರೆ.
ಇದನ್ನೂ ಓದಿ:ಟ್ರೆಡಿಷನಲ್​ ಡ್ರೆಸ್​ನಲ್ಲಿ ಮಿಂಚಿದ ಗುಳಿಕೆನ್ನೆ ಚೆಲುವೆ; ನಿಮ್ಮ ನಗುವೇ ಸುಂದರ ಎಂದ ಫ್ಯಾನ್ಸ್​
ಈ ವೇಳೆ ಮಾತನಾಡಿದ ಗುಜರಾತ್​ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್, ದೇಶವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗಾಗಿ ಕೆಲಸ ಮಾಡಬೇಕು. ಗುಜರಾತ್ ಸಿಎಂ ಆಗಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ತಂದ ಮೋದಿ, ಪ್ರಧಾನಿಯಾಗಿ ಈಗ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ತಂದಿದ್ದಾರೆ.ರೈತರ ಆದಾಯ ದ್ವಿಗುಣಗೊಳಿಸಲು ಕ್ರಮಕೈಗೊಂಡಿದ್ದಾರೆ.ಪ್ರತಿ ವರ್ಷ ಸರ್ಕಾರ ರೈತರ ಬ್ಯಾಂಕ್ ಖಾತೆಗಳಿಗೆ ರೂ 6,000 ಜಮೆ ಮಾಡುತ್ತದೆ.
ಅಧಿಕಾರಕ್ಕಾಗಿ ಜನರನ್ನು ಜಾತಿಯ ಆಧಾರದ ಮೇಲೆ ವಿಭಜಿಸಲು ಕಾಂಗ್ರೆಸ್​ ಹೆಸರುವಾಸಿಯಾಗಿದೆ. ಪ್ರಧಾನಿ ಮೋದಿ ಅವರು ಈ ಜಾತಿ ಆಧಾರಿತ ರಾಜಕೀಯವನ್ನು ತೊಡೆದುಹಾಕಿದರು ಮತ್ತು ಸಮಾಜದ ನಾಲ್ಕು ವಿಭಾಗಗಳಾದ ಮಹಿಳೆಯರು, ರೈತರು, ಯುವಕರು ಮತ್ತು ಬಡವರ ಸಬಲೀಕರಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಗುಜರಾತ್​ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + fifteen =
Remember me
