ತಿರುವನಂತಪುರಂ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ತ್ರಿಶೂರ್​ ಜಿಲ್ಲೆಯ ಕಣಿಮಂಗಲಂ ಎಂಬ ಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 8:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ತ್ರಿಶೂರ್​-ತ್ರಿಪ್ರಯಾರ್​ ನಡುವೆ ಬಸ್​ ಸಂಚರಿಸುತ್ತಿತ್ತು ಎಂದು ವರದಿಯಾಗಿದೆ. ಗಾಯಗೊಂಡಿರುವವರ ಪೈಕಿ ಓರ್ವ ಮಹಿಳೆ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ; ಕುಕಿ ಸಮುದಾಯದ ಮೂವರ ಹತ್ಯೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಅಪಘಾತ ಹೇಗೆ ಸಂಭವಿಸಿತ್ತು ಎಂದು ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಘಟನೆ ನಡೆದ ವೇಳೆ ಬಸ್ಸಿನಲ್ಲಿ ಒಟ್ಟು 50 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳಿಗೆ ಖಾಸಗಿ ಹಾಗೂ ತ್ರಿಶೂರ್​ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 10 =
Remember me
