ಡೆಹ್ರಾಡೂನ್:ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಚಾರ್‌ ಧಾಮ್‌ ಯಾತ್ರೆ ಬಹಳ ಮನ್ನಣೆ ಪಡೆದಿದೆ. ಇದಕ್ಕಾಗಿ ಜನರು ತಿಂಗಳುಗಳ ಮುಂಚೆಯೇ ನೊಂದಾಣಿ ಮಾಡಿಕೊಳ್ಳುತ್ತಾರೆ. ಅಪಾರ ಸಂಖ್ಯೆಯಲ್ಲಿ ಈ ಯಾತ್ರೆಯನ್ನು ಕೈಗೊಳ್ಳುವ ಮೂಲಕ ತೀರ್ಥಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ. ಚಾರ್​ ಧಾಮ ಯಾತ್ರೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 50ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌: ಭಾರೀ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ!
ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಧಾಮಗಳನ್ನು ಒಳಗೊಂಡಿರುವ ತೀರ್ಥಯಾತ್ರೆಗೆ ಪ್ರತಿದಿನ ಸರಾಸರಿ 70,000ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಿರಂತರವಾಗಿ ಬರುತ್ತಿದ್ದಾರೆ.

ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ” ಚಾರ್​ ಧಾಮ ಯಾತ್ರೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 52 ಚಾರ್ಧಾಮ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು” ಎಂದು ಹೇಳಿದರು. ಗಂಗೋತ್ರಿಯಲ್ಲಿ ಮೂವರು, ಯಮುನೋತ್ರಿಯಲ್ಲಿ 12, ಬದರಿನಾಥದಲ್ಲಿ 14 ಮತ್ತು ಕೇದಾರನಾಥದಲ್ಲಿ 23 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.
50 ವರ್ಷ ಮೇಲ್ಪಟ್ಟ ಭಕ್ತರಿಗೆ ವೈದ್ಯಕೀಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ ಮತ್ತು ಯಾತ್ರಾರ್ಥಿಗಳು ವೈದ್ಯಕೀಯವಾಗಿ ಸಾಕಷ್ಟು ಫಿಟ್ ಆಗಿಲ್ಲದಿದ್ದರೆ ಪ್ರಯಾಣಿಸದಂತೆ ಸೂಚಿಸಲಾಗಿದೆ ಎಂದು ಹೇಳಿದರು.ಆದಾಗ್ಯೂ, ಅವರು ಇನ್ನೂ ಯಾತ್ರೆಯನ್ನು ಮುಂದುವರಿಸಲು ಒತ್ತಾಯಿಸಿದರೆ, ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ ಅವರನ್ನು ಮುಂದೆ ಹೋಗಲು ಅನುಮತಿಸಲಾಗುತ್ತದೆ ಎಂದರು.
ಚಾರ್‌ಧಾಮ್ ಯಾತ್ರೆಯ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಇದುವರೆಗೆ ಒಂಬತ್ತು ಲಕ್ಷದ 67 ಸಾವಿರದ 302 ಭಕ್ತರು ಚಾರ್‌ಧಾಮ್‌ಗೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು. ನಾಲ್ಕು ತೀರ್ಥಕ್ಷೇತ್ರಗಳಲ್ಲಿ ಯಾತ್ರೆ ಸುಗಮವಾಗಿ ಸಾಗುತ್ತಿದೆ ಎಂದು ಪಾಂಡೆ ಹೇಳಿದರು.
ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಚ್‌ಮ್ಯಾನ್: ವಿಡಿಯೋ ವೈರಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − twelve =
Remember me
