ತಮಿಳುನಾಡು:ಕಸ್ಟಮ್ ಏರ್ ಇಂಟೆಲಿಜೆನ್ಸ್ ಯುನಿಟ್ (ಎಐಯು) ಅಧಿಕಾರಿಗಳು ವಿಶೇಷ ಜಾತಿಯ 6,850 ಜೀವಂತ ಆಮೆ(Red-eared slider)ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳು ಕೌಲಾಲಂಪುರದಿಂದ ತಮಿಳುನಾಡಿನ ತಿರುಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಿರುಚ್ಚಿಯ ಕಸ್ಟಮ್ಸ್ ಅಧಿಕಾರಿಗಳು ಗುಪ್ತಚರ ಮಾಹಿತಿ ಮೇರೆಗೆ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಇಬ್ಬರು ಪ್ರಯಾಣಿಕರನ್ನು ತಡೆದು, ಲಗೇಜ್​ಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಸ್ಟ್ರಾಲರ್ ಬ್ಯಾಗ್‌ನೊಳಗೆ ಸಣ್ಣ ಪೆಟ್ಟಿಗೆಗಳಲ್ಲಿ ಜೀವಂತ ಆಮೆಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಕೂಡಲೇ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಈತನ ಬೈಕ್ ಬೆಲೆ 85 ಸಾವಿರ ರೂ.; ಕಟ್ಟಬೇಕಿದೆ 70,000 ರೂ. ದಂಡ!
On specific intelligence, officers of Customs (AIU) Trichy Airport seized 6850 nos of Red-eared slider (a species of turtle) concealed by 02 passenger that arrived from Kuala Lumper to Trichy on 23.06.2023 by Air Asia flight AK 29@cbic_indiapic.twitter.com/khZrHcEdhT— Trichy Customs (Prev) Zone (@cusprevtrichy)June 23, 2023
On specific intelligence, officers of Customs (AIU) Trichy Airport seized 6850 nos of Red-eared slider (a species of turtle) concealed by 02 passenger that arrived from Kuala Lumper to Trichy on 23.06.2023 by Air Asia flight AK 29@cbic_indiapic.twitter.com/khZrHcEdhT
ಓರ್ವ ಬಂಧಿತನಿಂದ 57,441 ರೂ. ಮೌಲ್ಯದ ವಿದೇಶಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪರವಾನಗಿ ಇಲ್ಲದೆ ಜೀವಂತ ಆಮೆಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸಲಾಗಿದೆ. ಸದ್ಯ ಕೆಂಪು ಇಯರ್ಡ್ ಸ್ಲೈಡರ್ ಆಮೆಗಳನ್ನು ಅವುಗಳ ಮೂಲ ದೇಶಕ್ಕೆ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಸ್ಟಮ್ಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್ ಆಕ್ಟ್, 1962ರ ಅಡಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಲಯಕ್ಕೆ ಹಾಜರು ಪಡಿಸಲಾಗುವುದು. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + fifteen =
Remember me
