ನವದೆಹಲಿ:ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಾಹನಗಳಿಗೆ ಗುದ್ದಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ಓಡಿಶಾದ ಕೊರಾಪುಟ್ ಜಿಲ್ಲೆಯ ಬಿಜಾಪುರ ಗ್ರಾಮದ ಬಳಿ ನಡೆದಿದೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದ್ದು, ಅತಿವೇಗ ಚಾಲನೆಗೆ ನೆಟ್ಟಿಗರು ಕಿಡಿಕಾರಿದ್ದಾರೆ.
ವೈರಲ್​ ಆಗಿರುವ ವಿಡಿಯೋದಲ್ಲಿ ವೇಗವಾಗಿ ಬರುವ ಸ್ಕಾರ್ಪಿಯೋ ಕಾರೊಂದು ಆಟೋವನ್ನು ಹಿಂದಿಕ್ಕುವ ಆತುರದಲ್ಲಿ ಎದುರು ಬರುತ್ತಿದ್ದ ಟ್ರ್ಯಾಕ್ಟರ್​ ಹಾಗೂ ಬೈಕ್​ಗಳಿಗೆ ಡಿಕ್ಕಿ ಹೊಡೆಯುತ್ತಿರುವುದನ್ನು ನೋಡಬಹುದಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಆಟೋದಲ್ಲಿ 15 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆ ಬಳಿಕ ಕಾರಿನೊಂದಿಗೆ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
