ನವದೆಹಲಿ :ಕರೊನಾದಿಂದ ಭಾರತ ತತ್ತರಿಸುವ ಈ ಸಮಯದಲ್ಲಿ ಅನೇಕ ರಾಷ್ಟ್ರಗಳು ಸಹಾಯ ಹಸ್ತ ಚಾಚುತ್ತಿವೆ. ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯನ್ನು ನೀಗಿಸಲು ಅಮೆರಿಕದಿಂದ 318 ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳು ಇಂದು ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಿವೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಹರ್​ದೀಪ್​ ಸಿಂಗ್ ಪುರಿ, “ಕರೊನಾ ವಿರುದ್ಧದ ಹೋರಾಟವನ್ನು ಬಲಪಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅನುಮಾನ ಬೇಡ” ಎಂದು ಟ್ವೀಟ್​ ಮಾಡಿದ್ದಾರೆ. ಅಮೆರಿಕದ ಜೆಎಫ್​ಕೆ ವಿಮಾನ ನಿಲ್ದಾಣದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ 318 ಫಿಲಿಪ್ಸ್ ಆಕ್ಸಿಜನ್ ಕಾನ್ಸಂಟ್ರೇಟರ್​ಗಳ ಕನ್​ಸೈನ್​ಮೆಂಟ್​ಅನ್ನು ಏರ್ ಇಂಡಿಯಾ ವಿಮಾನ ಹೊತ್ತುತಂದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಭಾವ ಸತ್ತ ದಿನವೂ ಕರ್ತವ್ಯಕ್ಕೆ ಹಾಜರಾದ ಕರೊನಾ ವಾರಿಯರ್ !
ಸಿಂಗಪೂರ್​ನಿಂದ ಕೂಡ ಈ ನಿಟ್ಟಿನಲ್ಲಿ ಸಹಾಯ ಹರಿದುಬಂದಿದೆ. 500 ಬಿಪಿಎಪಿಗಳು, 250 ಆಕ್ಸಿಜನ್ ಕಾನ್ಸಂಟ್ರೇಟರ್​​ಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳು ಸಿಂಗಪೂರ್​ನಿಂದ ಏರ್​ ಇಂಡಿಯಾ ವಿಮಾನದಲ್ಲಿ ನಿನ್ನೆ ರಾತ್ರಿ ಮುಂಬೈ ತಲುಪಿವೆ ಎನ್ನಲಾಗಿದೆ.(ಏಜೆನ್ಸೀಸ್)
“ಬೆಡ್​ ಇದ್ದಲ್ಲಿ ಯಾವ ಆಸ್ಪತ್ರೆಯೂ ಅಡ್ಮಿಷನ್ ನಿರಾಕರಿಸುವಂತಿಲ್ಲ” ; ಖಾಸಗಿ ಆಸ್ಪತ್ರೆ ವೆಚ್ಚ ಭರಿಸಲಿದೆ ಸರ್ಕಾರ !

ಕರೊನಾ ರೋಗಿಗಾಗಿ ಮದುವೆ ಮಂಟಪವಾದ ಆಸ್ಪತ್ರೆ… ಪಿಪಿಇ ಕಿಟ್​ನಲ್ಲಿ ವಧು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
