ನವದೆಹಲಿ:ದೇಶದಲ್ಲಿ ಯಾವುದೇ ಪ್ರಕಾರದ ಕೈಗಾರಿಕೆಗಳು ವೈದ್ಯಕೀಯ ಉದ್ದೇಶಕ್ಕೆ ಮಾತ್ರ ದ್ರವಿಕೃತ ಆಮ್ಲಜನಕವನ್ನು ಉತ್ಪಾದಿಸಬೇಕು. ಇದರಿಂದ ಯಾರಿಗೂ ವಿನಾಯಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಇಂದು ಆದೇಶ ಮಾಡಿದೆ. ಮುಂದಿನ ಆದೇಶದವರೆಗೂ ಇದನ್ನು ಎಲ್ಲ ಕೈಗಾರಿಕೆಗಳು ತಪ್ಪದೇ ಪಾಲಿಸಬೇಕು ಎಂದು ಅದು ಹೇಳಿದೆ.
ದೇಶದಲ್ಲಿ ಕರೊನಾವೈರಸ್​ನ ಎರಡನೇ ಅಲೆ ವ್ಯಾಪಕವಾಗಿ ಆವರಿಸುತ್ತಿರುವುದರಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾಗಿದೆ. ಇದರಿಂದ ರೋಗಿಗಳಿಗೆ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಆಕ್ಸಿಜನ್ ವಿಚಾರವಾಗಿ ಕೆಲವರು ಕೇಂದ್ರ ಸರ್ಕಾರದ ಮೇಲೆ ಅಪಪ್ರಚಾರವನ್ನೂ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಶನಿವಾರ ದೇಶದಲ್ಲಿನ 9 ಬಗೆಯ ಕೈಗಾರಿಕೆಗಳು ಮಾತ್ರ ಆಕ್ಸಿಜನ್ ಉತ್ಪಾದನೆಯನ್ನು ವೈದ್ಯಕೀಯ ಉದ್ದೇಶಕ್ಕೆ ಹೊರತಪಡಿಸಿ ಅನ್ಯ ಉದ್ದೇಶಕ್ಕೆ ಉತ್ಪಾದಿಸುವ ಹಾಗಿಲ್ಲ ಎಂದು ಆದೇಶ ಮಾಡಿತ್ತು. ಇಂದು ಆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಎಲ್ಲ ಬಗೆಯ ಕೈಗಾರಿಕೆಗಳಿಗೂ ಇದು ಅನ್ವಯಿಸುತ್ತದೆ ಎಂದಿದೆ.
ಹಲವು ಕಂಪೆನಿಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ ಅಡಿ ಆಕ್ಸಿಜನ್ ಉತ್ಪಾದಿಸಿ ಕೇಂದ್ರ ಸರ್ಕಾರಗಳ ಮೂಲಕ ರಾಜ್ಯ ಸರ್ಕಾರಗಳಿಗೆ ತಲುಪಿಸುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ಸರ್ಕಾರಗಳಿಗೆ ಸವಾಲಾಗಿದೆ.
ರೆಮ್​ಡಿಸಿವಿರ್ ಬಗ್ಗೆ ಆಘಾತಕಾರಿ ಅಂಶವನ್ನು ಬಿಚ್ಚಿಟ್ಟ ಏಮ್ಸ್​ ವೈದ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
