ನವದೆಹಲಿ:ಮಣಿಪುರದಲ್ಲಿ ಸಂಭವಿಸಿದ್ದ ಜನಾಂಗೀಯ ಘರ್ಷಣೆಗೆ ಸಂಬಂಧಿಸಿದಂತೆ ತನಿಖೆಯ ಮೇಲ್ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ಮೂವರು ನಿವೃತ್ತ ನ್ಯಾಯಮೂರ್ತಿಗಳನ್ನೊಳಗೊಂಡ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ತನಿಖೆಯ ಮೇಲ್ವಿಚಾರಣೆ ನಡೆಸಲು ಸಮಿತಿ ಒಂದನ್ನೂ ನೇಮಿಸುವ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​, ಮನೋಜ್​ ಮಿಶ್ರಾ, ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ನೀಡಿದೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯ ಕುರಿತು ಸಿಬಿಐ ಹಾಗೂ ಸ್ಥಳೀಯ ಪೊಲೀಸರು ನಡೆಸುತ್ತಿರುವ ತನಿಖೆಯನ್ನೂ ಪರಿಶೀಲಿಸಲು ಸುಪ್ರೀಂ ಕೋರ್ಟ್​ ಜಮ್ಮು-ಕಾಶ್ಮೀರ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಗೀತಾ ಮಿತ್ತಲ್​ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ಮಹಿಳಾ ನ್ಯಾಯಾಂಗ ಸಮಿತಿಯನ್ನು ರಚಿಸಿದೆ.
Manipur violence case | The Committee of three former judges will be headed by Justice Gita Mittal and also comprise Justice Shalini Joshi, Justice Asha Menon, says Supreme Court.https://t.co/wm8KwBZezz
ಇದನ್ನೂ ಓದಿ:VIDEO| ಜನನಿಬಿಡ ಪ್ರದೇಶದಲ್ಲೇ ಹೆಂಡತಿಯನ್ನು ಹತ್ಯೆಗೈದ ಪತಿ
ಸಮಿತಿಯಲ್ಲಿ ಮಾಜಿ ನ್ಯಾಯಮೂರ್ತಿಗಳಾದ ಶಾಲಿನಿ ಜೋಶಿ(ಬಾಂಬೆ ಹೈಕೋರ್ಟ್​) ಮತ್ತು ಆಶಾ ಮೆನನ್(ದೆಹಲಿ ಹೈಕೋರ್ಟ್​)​ ಇದ್ದಾರೆ. ಮಹಿಳಾ ನ್ಯಾಯಾಂಗ ಸಮಿತಿಯೂ ಸಿಬಿಐ ಹಾಗೂ ಪೊಲೀಸರು ನಡೆಸುತ್ತಿರುವ ತನಿಖೆಯ ಪ್ರಗತಿ, ಪರಿಹಾರ ಕ್ರಮ ಹಾಗೂ ಪುನರ್ವಸತಿ ಕಲ್ಪಿಸುವ ಕೆಲಸ ಮಾಡಲಿದೆ ಎಂದು ಸುಪ್ರೀಂ ಕೋರ್ಟ್​ ತ್ರಿಸದಸ್ಯ ಪೀಠ ಹೇಳಿದೆ.
ಇದಲ್ಲದೆ ಸಿಬಿಐಗೆ ವರ್ಗಾಯಿಸದ 42 ಪ್ರಕರಣಗಳ ವಿಚಾರಣೆಯನ್ನೂ SIT ತನಿಖೆ ನಡೆಸಲಿದೆ. ಮಾಜಿ ಐಪಿಎಸ್​ ಅಧಿಕಾರಿ ದತ್ತಾತ್ರೇಯ ಪಡಸಾಲಗೀಕರ್​ ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​, ಮನೋಜ್​ ಮಿಶ್ರಾ, ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಆದೇಶ ನೀಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 11 =
Remember me
