ಪೋರಬಂದರ್:ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿಯನ್ನು ಗುಜರಾತ್​ನ ಕರಾವಳಿ ತೀರದಲ್ಲಿ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಆರು ಪಾಕಿಸ್ತಾನಿ ಪ್ರಜೆಗಳು ಹಾಗೂ ಹಡಗಿನಲ್ಲಿದ್ದ ಸುಮಾರು 480 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೋಸ್ಟ್​ ಗಾರ್ಡ್​ನ ಹಿರಿಯ ಅಧಿಕಾರಿಯೊಬ್ಬರು, ಗುಪ್ತಚರ ಇಲಾಖೆಯ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ಭಾರತೀಯ ಕೋಸ್ಟ್ ಗಾರ್ಡ್, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB) ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ATS) ಅಧಿಕಾರಿಗಳು ಅರಬ್ಬಿ ಸಮುದ್ರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಷ್ಟ್ರೀಯ ಕಡಲ ಗಡಿ ರೇಖೆ(IMBL) ಬಳಿ ಡ್ರಗ್ಸ್ ಸಾಗಿಸುತ್ತಿದ್ದ ದೋಣಿಯನ್ನು ವಶಕ್ಕೆ ಪಡೆದಿದ್ದಾರೆ.
ಪೋರಬಂದರ್ ಕರಾವಳಿಯಿಂದ ಸುಮಾರು 480 ಕೋಟಿ ರೂಪಾಯಿ ಮೌಲ್ಯದ 180 ನಾಟಿಕಲ್ ಮೈಲು ದೂರದಲ್ಲಿ ಸುಮಾರು 60 ಪ್ಯಾಕೆಟ್ ಡ್ರಗ್ಸ್ ಸಾಗಿಸುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಡ್ರಗ್ಸ್​​ ವಿರುದ್ಧದ ಎರಡನೇ ಕಾರ್ಯಾಚರಣೆಯಾಗಿದ್ದು, ಫೆಬ್ರವರಿ 26ರಂದು ಪೋರ್​ಬಂದರ್​ ಸಮುದ್ರತಿರದಲ್ಲಿ 3,300 ಕೆಜಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕೋಸ್ಟ್​ ಗಾರ್ಡ್​ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Porbandar: Six Pakistanis were nabbed with a huge quantity of drugs in a joint operation of Gujarat ATS, Indian Coast Guard and NCB. Drugs worth Rs 480 crores were seized(Visuals of the boat that was seized)https://t.co/ukUY5vuqVvpic.twitter.com/PLDmv934tN
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
