ಇಸ್ಲಾಮಾಬಾದ್‌:ಪಾಕಿಸ್ತಾನದ ಮಾಜಿ ಪ್ರಧಾನಿ ಶಾಹಿದ್‌ ಖಾನ್‌ ಅಬ್ಬಾಸಿ‌ ಮತ್ತು ಪಾಕ್​ನ ರೈಲ್ವೆ ಸಚಿವ ಶೇಖ್‌ ರಶೀದ್‌ಗೆ ಕರೊನಾ ಸೋಂಕು ತಗುಲಿದೆ.
ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರು ಕ್ವಾರಂಟೈನ್‌ನಲ್ಲಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ 24 ಗಂಟೆಯಲ್ಲಿ 161 ಹೊಸ ಕೊವಿಡ್​-19 ಪ್ರಕರಣಗಳು: ಇಂದು ಯಾದಗಿರಿಯಲ್ಲೇ ಜಾಸ್ತಿ
ಪಾಕಿಸ್ತಾನದಲ್ಲಿ ಇದುವರೆಗೆ ನಾಲ್ಕು ಮಂದಿ ಜನಪ್ರತಿನಿಧಿಗಳು ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ. 2017 ರಿಂದ 2018ರವರೆಗೂ ಪ್ರಧಾನಿಯಾಗಿದ್ದ 61 ವರ್ಷದ ಅಬ್ಬಾಸಿಗೆ, ಸೋಂಕಿನ ಲಕ್ಷಣ ಗೋಚರವಾಗುತ್ತಿದ್ದಂತೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಪಾಕಿಸ್ತಾನದ ಹಾಲಿ ಪ್ರಧಾನಿ ಇಮ್ರಾನ್​ ಖಾನ್​ ಕೂಡ ಕರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಈದಿ ಫೌಂಡೇಶನ್‌ನ ಮುಖ್ಯಸ್ಥ ಹಾಗೂ ಪ್ರಸಿದ್ಧ ಸಮಾಜ ಸೇವಕ ಅಬ್ದುಲ್‌ ಸತ್ತಾರ ಈದಿ ಅವರ ಪುತ್ರ ಫೈಸಲ್‌ ಅವರನ್ನು ಇಮ್ರಾನ್‌ ಖಾನ್‌ ಭೇಟಿ ಮಾಡಿದ್ದರು. ಈ ಭೇಟಿಯ ನಮತರ ಫೈಸಲ್​ಗೆ ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಇಮ್ರಾನ್​ ಖಾನ್​ ಕೂಡ ಗಾಬರಿಗೊಂಡು ಪರೀಕ್ಷೆ ಮಾಡಿಸಿಕೊಂಡಿದ್ದರು. ಅದರೆ ಅವರಿಗೆ ಸೋಂಕು ತಗುಲಿಲ್ಲ ಎಂದು ದೃಢಪಡಿಸಲಾಗಿತ್ತು.
ಸೋಮವಾರದವರೆಗೆ ಪಾಕಿಸ್ತಾನದಲ್ಲಿ 1.8 ಲಕ್ಷ ಸೋಂಕಿತರು ಪತ್ತೆಯಾಗಿದ್ದಾರೆ. 35,018 ಮಂದಿ ಗುಣಮುಖರಾಗಿದ್ದರೆ, ಇದಾಗಲೇ 2,172 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಜೂನ್​ 30ರೊಳಗೆ ಆಧಾರ್​- ಪ್ಯಾನ್​ ಜೋಡಣೆ ಕಡ್ಡಾಯ: ಹೇಗೆ? ಏಕೆ? ಇಲ್ಲಿದೆ ವಿವರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 8 =
Remember me
