ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಕಳೆದ ವಾರ ನಡೆದ ಉಗ್ರರ ದಾಳಿಯಲ್ಲಿ ಒಬ್ಬ ಕರ್ನಲ್​ ಸೇರಿ ಐವರು ಯೋಧರು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ಭಾರತ ತನ್ನ ಮೇಲೆ ಪ್ರತ್ರೀಕಾರದ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ಆತಂಕಗೊಂಡಿದೆ. ಈ ಹಿನ್ನೆಲೆಯಲ್ಲಿ ಅದು ತನ್ನ ವಾಯುಪಡೆಯ ವೈಮಾನಿಕ ಅಭ್ಯಾಸ ಕಾರ್ಯಕ್ರಮವನ್ನು ಮತ್ತಷ್ಟು ಚುರುಕುಗೊಳಿಸಿದೆ. ತನ್ಮೂಲಕ ವಾಯುಗಡಿಯ ಭದ್ರತೆಯನ್ನು ಹೆಚ್ಚಿಸಿದೆ.
ಪಾಕಿಸ್ತಾನದ ವಾಯುಪಡೆ ಸಿಬ್ಬಂದಿ ಈ ಮೊದಲೇ ವೈಮಾನಿಕ ಅಭ್ಯಾಸ ಆರಂಭಿಸಿದ್ದರು. ಈ ಬಗ್ಗೆ ಭಾರತಕ್ಕೆ ಮಾಹಿತಿಯನ್ನೂ ನೀಡಿದ್ದರು. ಆದರೆ ಹಂದ್ವಾರಾ ಉಗ್ರರ ದಾಳಿಯ ಬಳಿಕ ಭಾರತದಿಂದ ಪ್ರತಿಕಾರದ ದಾಳಿ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅದು ಅಭ್ಯಾಸದ ತೀವ್ರತೆಯನ್ನು ಹೆಚ್ಚಿಸಿದೆ ಎನ್ನಲಾಗುತ್ತಿದೆ. ಈ ಕಾರ್ಯದಲ್ಲಿ ಅದು ಎಫ್​ 16 ಮತ್ತು ಜೆಎಫ್​-17 ಫೈಟರ್​ಜೆಟ್​ಗಳನ್ನು ಹೆಚ್ಚುಹೆಚ್ಚಾಗಿ ಬಳಸಲಾರಂಭಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮೌಂಟ್​ ಎವರೆಸ್ಟ್​ ಬುಡಕ್ಕೂ ಬಂತು ಚೀನಾ ಗಡಿ ತಂಟೆ ವಿವಾದ
ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ನುಸುಳುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಅಣಕು ಧ್ವಜ ಕಾರ್ಯಾಚರಣೆ ನಡೆಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಅನುಮಾನ ವ್ಯಕ್ತಪಡಿಸಿದ್ದರು.
ಭಾರತದಲ್ಲಿ ಏನಾದರೂ ಅನಾಹುತ ಸೃಷ್ಟಿಸುವ ದುಸ್ಸಾಹಸ ತೋರಿದರೆ ಅದಕ್ಕೆ ಸರಿಯಾದ ಉತ್ತರ ನೀಡುವುದಾಗಿ ಭಾರತ ಸದಾ ಪಾಕಿಸ್ತಾನವನ್ನು ಎಚ್ಚರಿಸುತ್ತಲೇ ಇದೆ. ಈ ಎಲ್ಲ ಹಿನ್ನೆಲೆಯಲ್ಲಿ ಪಾಕಿಸ್ತಾನ ತನ್ನ ವಾಯುಗಡಿಯ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿದೆ ಎನ್ನಲಾಗಿದೆ.
ಪರಸ್ಪರ ಸಮಾಧಾನಿಸಿಕೊಳ್ಳುತ್ತಿರುವ ಸಮಾನ ದುಃಖಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 2 =
Remember me
