ಮಧ್ಯಪ್ರದೇಶ:ಇಂದು ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಭಾರತ್​ ಜೋಡೋ ಯಾತ್ರೆಯ ಸಂದರ್ಭ ಪಾಕ್​ ಪರ ಘೋಷಣೆಗಳು ಕೇಳಿಬಂದಿವೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪಿಸಿದ್ದಾರೆ. ಆದರೆ, ಬಿಜೆಪಿ ಟ್ವಿಟರ್‌ನಲ್ಲಿ ನಕಲಿ ವಿಡಿಯೋಗಳನ್ನು ಹರಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ಖಾರ್ಗೋನ್​ನಲ್ಲಿ ‘ಭಾರತ್ ಜೋಡೋ ಯಾತ್ರೆ’ಯ ವಿಡಿಯೋವನ್ನು ಅಮಿತ್ ಪೋಸ್ಟ್ ಮಾಡಿದ್ದಾರೆ. ‘ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆಗೆ ಸೇರಲು ರಿಚಾ ಚಡ್ಡಾ ಮನವಿ ಮಾಡಿದ ಕೂಡಲೇ ಖಾರ್ಗೋನ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಕೇಳಿಬಂದಿವೆ. ಈ ವಿಡಿಯೋವನ್ನು ಮಧ್ಯಪ್ರದೇಶದ ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ವಿಷಯ ಬೆಳಕಿಗೆ ಬರುತ್ತಿದ್ದಂತೆ ಅದನ್ನು ಅಳಿಸಿದೆ. ಇದು ಕಾಂಗ್ರೆಸ್‌ನ ನಿಜವಾದ ಮುಖ’ ಎಂದು ಅಮಿತ್​ ಮಾಳವೀಯ ತಮ್ಮ ಟ್ವೀಟ್​ನಲ್ಲಿ ಬರೆದಿದ್ದಾರೆ.
ಆದರೆ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶುಕ್ರವಾರ ಬಿಜೆಪಿ ಆರೋಪವನ್ನು ತಳ್ಳಿಹಾಕಿದ್ದು, ಟ್ವಿಟರ್‌ನಲ್ಲಿ ‘ಇದು ಭಾರತ್ ಜೋಡೋ ಯಾತ್ರೆಗೆ ಕಳಂಕ ತರಲು ಬಿಜೆಪಿಯ ಡರ್ಟಿ ಟ್ರಿಕ್ಸ್ ಡಿಪಾರ್ಟ್‌ಮೆಂಟ್‌ನ ಕೆಲಸ. ಭಾರತ್ ಜೋಡೋ ಯಾತ್ರೆಗೆ ಸಿಗುತ್ತಿರುವ ಅಪಾರ ಜನಬೆಂಬಲವನ್ನು ನೋಡಿ ಭಯ ಬಿದ್ದ ಬಿಜೆಪಿ ಹೀಗೆ ಮಾಡಿದೆ. ಅದರ ವಿರುದ್ಧ ನಾವು ತಕ್ಷಣ ಕಾನೂನು ಕ್ರಮ ಕೈಗೊಳ್ಳುತ್ತಿದ್ದೇವೆ. ಬಿಜೆಪಿಯ ಇಂತಹ ಹೇಯ ತಂತ್ರಗಳಿಗೆ ನಾವು ಬಲಿಯಾಗುವುದಿಲ್ಲ. ಅವರಿಗೆ ತಕ್ಕ ಉತ್ತರ ನೀಡಲಾಗುವುದು’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಈ ನಡುವೆ ಪಾಕ್​ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ‘ಕಾಂಗ್ರೆಸ್ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆಯೇ ಅಥವಾ ದೇಶವನ್ನು ಒಡೆಯಲು ಬಯಸುವವರನ್ನು ಒಗ್ಗೂಡಿಸುತ್ತಿದೆಯೇ’ ಎಂದು ಸಿಎಂ ಚೌಹಾಣ್ ಪ್ರಶ್ನಿಸಿದ್ದಾರೆ. ‘ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿದವು. ಭಾರತವನ್ನು ಒಗ್ಗೂಡಿಸುವುದೇ ಅಥವಾ ಭಾರತವನ್ನು ಒಡೆಯುವವರನ್ನು ಒಗ್ಗೂಡಿಸುವುದೇ? ಭಾರತವನ್ನು ಈ ಹಿಂದೆಯೂ ಕಾಂಗ್ರೆಸ್​ ಒಡೆದಿದೆ. ಮತ್ತೆ ಭಾರತವನ್ನು ಒಡೆಯುವ ಉದ್ದೇಶವಿದೆಯೇ? ಪಾಕ್​ ಪರ ಘೋಷಣೆಗಳನ್ನು ಕೂಗುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಆಕ್ರೋಶ ಹೊರ ಹಾಕಿದ್ದಾರೆ.
ಭಾರತ್​ ಜೋಡೊ ಯಾತ್ರೆ ನವೆಂಬರ್ 23 ರಂದು ಬುರ್ಹಾನ್‌ಪುರ ಜಿಲ್ಲೆಯಿಂದ ಮಹಾರಾಷ್ಟ್ರದ ತನಕ ಯಾತ್ರೆ ಪೂರ್ಣಗೊಳಿಸಿದ ನಂತರ ಬಿಜೆಪಿ ಆಡಳಿತದ ಮಧ್ಯಪ್ರದೇಶವನ್ನು ಪ್ರವೇಶಿಸಿತ್ತು. ಭಾರತ್​ ಜೋಡೊ ಯಾತ್ರೆ ರಾಜಸ್ಥಾನ ಪ್ರವೇಶಿಸುವ ಮುನ್ನ ಮಧ್ಯಪ್ರದೇಶದ ಮಾಲ್ವಾ-ನಿಮಾರ್ ಪ್ರದೇಶದಲ್ಲಿ 12 ದಿನಗಳಲ್ಲಿ 380 ಕಿ.ಮೀ ಕ್ರಮಿಸಲಿದೆ. ಈ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಆದಿವಾಸಿಗಳು ವಾಸಿಸುತ್ತಿದ್ದಾರೆ.(ಏಜೆನ್ಸೀಸ್​)
After Richa Chaddha’s public application to join Rahul Gandhi’s Bharat “Jodo” Yatra, “Pakistan Zindabad” (listen towards the end of the video) slogans raised in Khargon.INC MP posted the video and then deleted it after the faux pas came to light.This is Congress’s truth…pic.twitter.com/ZkVEkd4pCf— Amit Malviya (@amitmalviya)November 25, 2022
After Richa Chaddha’s public application to join Rahul Gandhi’s Bharat “Jodo” Yatra, “Pakistan Zindabad” (listen towards the end of the video) slogans raised in Khargon.INC MP posted the video and then deleted it after the faux pas came to light.This is Congress’s truth…pic.twitter.com/ZkVEkd4pCf
भारत जोड़ो यात्रा को अपार जन समर्थन मिलता देख बौखलाई भाजपा ने यात्रा को बदनाम करने के लिए एक डॉक्टर्ड विडियो चलाया है।हम इसके ख़िलाफ़ तुरंत क़ानूनी कार्यवाही कर रहे हैं। हम भाजपा के ऐसे घिनौने हथकंडों के लिए तैयार हैं। उनको करारा जवाब दिया जाएगा!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
