ನವದೆಹಲಿ:ದೇಶದಲ್ಲಿ ಭಯೋತ್ಪಾದಕ ಚಟುವಟಿಗಳನ್ನು ನಡೆಸಲು ಪ್ರಯತ್ನಿಸಿದ ಬಳಿಕ ಗಡಿ ದಾಟಿ ಓಡಿ ಹೋಗುವ ಉಗ್ರರನ್ನು ಸೆದೆಬಡಿಯಲು ಭಾರತ, ಪಾಕಿಸ್ತಾನದ ಒಳಗೆ ನುಗ್ಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹೇಳಿಕೆಯನ್ನು ಪಾಕ್​ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ರಾಜ್​ನಾಥ್​ ಸಿಂಗ್​ ಅವರ ಹೇಳಿಕೆಯನ್ನು ಪ್ರಚೋದನಕಾರಿ ಮತ್ತು ಮಯೋಪಿಕ್​ ಎಂದು ಕರೆದಿದೆ.
ರಾಜ್​ನಾಥ್​ ಸಿಂಗ್​​ ಅವರ ಹೇಳಿಕೆಯು ಪ್ರಚೋದನಕಾರಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ತೋರಿಸಿದೆ. ಪಾಕಿಸ್ತಾನ ತನ್ನದೇ ಆದ ಭದ್ರತೆಗೆ ಸಮರ್ಥವಾಗಿದೆ ಮತ್ತು ನಾವು ಇದನ್ನು ಇತಿಹಾಸದಲ್ಲಿ ಮತ್ತೆ ಮತ್ತೆ ಸಾಬೀತುಪಡಿಸಿದ್ದೇವೆ ಎಂದು ಪಾಕಿಸ್ತಾನ ಸರ್ಕಾರದ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.
ಇದನ್ನೂ ಓದಿ:ಕೊಹ್ಲಿ ಒಂದು ಬಾರಿ ಹೇರ್​ಸ್ಟೈಲ್​ ಮಾಡಿಸಿದರೆ ಅದರ ಬೆಲೆ ಎಷ್ಟು ಗೊತ್ತಾ?; ಆಚ್ಚರಿಯ ಹೇಳಿಕೆ ನೀಡಿದ ಆಲಿಮ್​ ಹಕೀಮ್​
ವಿದೇಶಿ ನೆಲದಲ್ಲಿ ವಾಸಿಸುವ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಯೋಜನೆಯ ಭಾಗವಾಗಿ 2020 ರಿಂದ ಪಾಕಿಸ್ತಾನದಲ್ಲಿ ಭಾರತ ಸರ್ಕಾರ 20 ಉಗ್ರರನ್ನು ಕೊಂದಿದೆ ಎಂದು ಬ್ರಿಟನ್‌ನ ಗಾರ್ಡಿಯನ್ ಪತ್ರಿಕೆ ವರದಿ ಮಾಡಿದ ಬೆನ್ನಲ್ಲೇ ರಾಜನಾಥ್​ ಸಿಂಗ್​ ಅವರು ಈ ಹೇಳಿಕೆಯನ್ನು ನೀಡಿದ್ದರು.
ಭಾರತವು ಸದಾ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತದೆ. ಆದರೆ, ಯಾರಾದರೂ ಭಾರತದ ಮೇಲೆ ಕೋಪದ ಕಣ್ಣುಗಳನ್ನು ಬೀರಿದರೆ, ಭಾರತಕ್ಕೆ ಬಂದು ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಪ್ರಯತ್ನಿಸಿದರೆ, ನಾವು ಅವರನ್ನು ಬಿಡುವುದಿಲ್ಲ ಎಂದು ರಾಜನಾಥ್​ ಸಿಂಗ್​ ಎಚ್ಚರಿಕೆ ನೀಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
