ನವದೆಹಲಿ:ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಪಾಕಿಸ್ತಾನದ ವಶದಲ್ಲಿದ್ದ 80 ಭಾರತದ ಮೀನುಗಾರರನ್ನು ಅಲ್ಲಿನ ಸರ್ಕಾರ ಗುರುವಾರ (ನವೆಂಬರ್ 09)ರಂದು ಕರಾಚಿಯ ಮಲಿರ್​ ಜೈಲಿನಿಂದ ಬಿಡುಗಡೆ ಮಾಡಿದೆ.
ಅಕ್ರಮ ವಿದೇಶಿ ವಲಸಿಗರು ಮತ್ತು ಪ್ರಜೆಗಳನ್ನು ದೇಶದಿಂದ ಹೊರಹಾಕಲು ಪಾಕಿಸ್ತಾನ ಸರ್ಕಾರವು ನಡೆಸುತ್ತಿರುವ ಅಭಿಯಾನದಜ ಅಡಿಯಲ್ಲಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು, ಭಾರತೀಯ ಮೀನುಗಾರರನ್ನು ಅಲ್ಲಮ ಇಕ್ಬಾಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಭದ್ರತೆಯೊಂದಿಗೆ ಕಳುಹಿಸಲಾಗುತ್ತಿದ್ದು, ಅವರು ನಾಳೆ ಲಾಹೋರ್ ತಲುಪಲಿದ್ದಾರೆ. ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Pakistan today released 80 Indian fishermen. They are at Karachi cant station waiting for a train on their way back to India via wagah.pic.twitter.com/pjbWq4F503
ಇದನ್ನೂ ಓದಿ:ರಾಜ್ಯೋತ್ಸವ ರಸಪ್ರಶ್ನೆ – 9: ಫಲಿತಾಂಶ
ಈ ಕುರಿತು ಮಾತನಾಡಿರುವ ಈಧಿ ವೆಲ್ಫೇರ್ ಟ್ರಸ್ಟ್‌ನ ಮುಖ್ಯಸ್ಥ ಫೈಸಲ್ ಈಧಿ, ಬಹುತೇಕ ಬಡವರಾಗಿರುವ ಭಾರತೀಯ ಮೀನುಗಾರರು ಅಂತಿಮವಾಗಿ ತಮ್ಮ ಮನೆಗೆ ಮರಳುತ್ತಿರುವುದು ಸಂತೋಷದ ವಿಚಾರ.ಭಾರತೀಯ ಮೀನುಗಾರರು ಶೀಘ್ರದಲ್ಲೇ ತಮ್ಮ ಕುಟುಂಬಗಳನ್ನು ಸೇರಿಕೊಳ್ಳಲಿದ್ದಾರೆ. ನಾವು ಅವರಿಗೆ ಮನೆಗೆ ತೆಗೆದುಕೊಂಡು ಹೋಗಲು ಹಣ ಮತ್ತು ಇತರ ಉಡುಗೊರೆಗಳನ್ನು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಪಾಕಿಸ್ತಾನ ಮತ್ತು ಭಾರತ ಪರಸ್ಪರರ ಮೀನುಗಾರರನ್ನು ನಿಯಮಿತವಾಗಿ ಬಂಧಿಸುತ್ತಿವೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen − nine =
Remember me
